ಮೈಸೂರು

ಮಹಿಳೆ ಆತ್ಮಹತ್ಯೆ

Published On :

ಮೈಸೂರು: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲೂಕಿನ ಇಲವಾಲ ಬಳಿಯ ಆರ್‌ಎಂಪಿ ಕ್ವಾಟ್ರಸ್‌ನಲ್ಲಿ ಶುಕ್ರವಾರ ನಡೆದಿದೆ. ಆರ್‌ಎಂಪಿ ನೌಕರ ರಾಜೇಶ್ ಎಂಬವರ ಪತ್ನಿ ಲಾವಣ್ಯ(21) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಒಂದೂವರೆ ವರ್ಷದ ಮಗುವಿದೆ. ಲಾವಣ್ಯ ಮೈಸೂರು ತಾಲೂಕು ಜಯಪುರ ಹೋಬಳಿ ಹಾರೋಹಳ್ಳಿ ನಿವಾಸಿ ಅಣ್ಣಯ್ಯ ಎಂಬವರ ಪುತ್ರಿ. ಪರಿಸ್ಥಿತಿ ಕೈ ಮೀರಿದೆ. ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಕ್ಷಮಿಸಿ ಎಂದು ಪತ್ರ ಬರೆದಿಟ್ಟಿದ್ದಾರೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಇಲವಾಲ ಠಾಣೆಯ ಎಸ್‌ಐ ಟಿ.ಎಂ. ಪುನೀತ್ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ಮೈಸೂರು: ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ನೊಂದು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಮೈಸೂರು ತಾಲೂಕು ರಮ್ಮನಹಳ್ಳಿ ನಿವಾಸಿ ಲಕ್ಷ್ಮಣ್ ಎಂಬವರ ಪುತ್ರ ಸ್ವಾಮಿ (30) ಮೃತವ್ಯಕ್ತಿ. ಇವರಿಗೆ ಪತ್ನಿ, ಪುತ್ರ ಇದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮಿ ಗುರುವಾರ ರಾತ್ರಿ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದು, ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.