ಬಜೆಟ್ ಪೂರ್ವಭಾವಿ ಅಹವಾಲು ಸ್ವೀಕಾರ
ನಂಜನಗೂಡು: ಪಟ್ಟಣದ ರಸ್ತೆಗಳ ಧೂಳು ನಿಯಂತ್ರಣಕ್ಕೆ ಎರಡು ಧೂಳು ಹೀರುವ ಯಂತ್ರಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಬಸವರಾಜು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪುರಸಭೆ ಬಜೆಟ್ನ ಪೂರ್ವ ಸಿದ್ಧತಾ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಹಾಗು ಸಂಘ- ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅವರು ಮಾತನಾಡಿದರು.
ಪಟ್ಟಣ ವ್ಯಾಪ್ತಿಯಲ್ಲಿ ಧೂಳಿನಿಂದ ಜನರಿಗಾಗುತ್ತಿರುವ ಅನಾನುಕೂಲ ತಪ್ಪಿಸಲು ಧೂಳು ಹೀರುವ ಯಂತ್ರ, ಪಟ್ಟಣಕ್ಕೆ 24್ಢ7 ಕುಡಿಯುವ ನೀರು ಪೂರೈಸಲು 24 ಕೋಟಿ ಅಂದಾಜು ವೆಚ್ಚದಲ್ಲಿ ಟೆಂಡರ್ ಮೂಲಕ ಗುತ್ತಿಗೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ನಾಗರಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು. ಪುರಸಭೆಯ ನಿಧಿಯಿಂದ ಎರಡು ಟ್ಯಾಂಕರ್ ಖರೀದಿಸಬೇಕು ಎಂದರು.
ಉಳಿದಂತೆ ಚರಂಡಿ ನೀರು ನದಿಗೆ ಸೇರುತ್ತಿರುವುದು, ಖಾಸಗಿ ಲೇ ಔಟ್ಗಳಲ್ಲಿ ಮೂಲಭೂತ ಸೌಲಭ್ಯ ಕೊರತೆ, ಪ್ರಮುಖ ರಸ್ತೆಗಳಲ್ಲಿ ಧೂಳಿನ ಸಮಸ್ಯೆ, ರಸ್ತೆಗಳ ದುಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಡಿ. ರಮೇಶ್, ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀನಿವಾಸ್, ಶ್ರೀಧರ್, ದೊರೆಸ್ವಾಮಿ, ಸಿ.ಎಂ. ಶಂಕರ್, ತಹಸೀಲ್ದಾರ್ ಕೃಷ್ಣಮೂರ್ತಿ, ಪುರಸಭೆ ಸದಸ್ಯರಾದ ದೊಡ್ಡಮಾದಯ್ಯ, ದೊರೆಸ್ವಾಮಿ, ರಾಜೇಶ್, ಅನಸೂಯಾ, ಗಿರೀಶ್, ವಿಜಯಾಂಬಿಕಾ, ಪ್ರದೀಪ್, ಮಹದೇವಸ್ವಾಮಿ, ಬಾಬು, ಪುರಸಭೆ ಲೆಕ್ಕಾಧಿಕಾರಿ ವೆಂಕಟನಾಯಕ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

