ಮಾನಸಿ ನಗರಕ್ಕೆ ಶೀಘ್ರ ಮೂಲಸೌಕರ್ಯ: ಜಿಟಿಡಿ
ಮೈಸೂರು: ಮಾನಸಿನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹಾಗೂ ಶಾಸಕರ ನಿಧಿಯಿಂದ ಬಸ್ ತಂಗುದಾಣ ನಿರ್ಮಿಸಿಕೊಡುವುದಾಗಿ ಚಾಮುಂಡೇಶ್ವರಿ ಕ್ಷೇತ್ರ ಶಾಸಕ ಜಿ.ಟಿ.ದೇವೇಗೌಡ ಭರವಸೆ ನೀಡಿದರು.
ನಗರದ ಬನ್ನೂರು ವರ್ತುಲ ರಸ್ತೆಯ ಸಮೀಪದ ಮಾನಸಿನಗರದಲ್ಲಿ ನಡೆದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಥಮ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಘದ ಅಧ್ಯಕ್ಷ ಬೊಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಮಾನಸಿನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಡಿ.ಬಿ. ಲಿಂಗಣ್ಣಯ್ಯ ಮಾತನಾಡಿ, ನಗರದಲ್ಲಿ ಮೂಲಭೂತ ನಾಗರಿಕ ಸೌಲಭ್ಯಗಳಾದ ಕುಡಿಯುವ ನೀರು, ನಗರ ಬಸ್ ಸಂಚಾರ ವ್ಯವಸ್ಥೆ, ವಿದ್ಯುತ್ ಸಮಸ್ಯೆಗಳು ಹಾಗೂ ಹೊರ ವಲಯದಲ್ಲಿರುವುದರಿಂದ ಅಪರಾಧ ಮತ್ತು ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಬೇಕೆಂದು ಮನವಿ ಮಾಡಿದರು.
ಮುಖ್ಯ ಅತಿಥಿಗಳಾಗಿ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘದ ಅಧ್ಯಕ್ಷ ಮಹೇಶ್, ಡಿವೈಎಸ್ಪಿ ಶ್ರೀಹರಿ ಬರಗೂರು, ನಗರ ಸಾರಿಗೆ ಇಲಾಖೆಯ ಮಸೂರು ಅಹಮದ್, ನಗರಾಭಿವೃದ್ಧಿ ಪ್ರಾಧಿಕಾರದ 8ನೇ ವಲಯಾಧಿಕಾರಿ ಎಚ್.ಕೆ. ರಾಮಸ್ವಾಮಿ, 57ನೇ ವಾರ್ಡ್ನ ನಗರಪಾಲಿಕೆ ಸದಸ್ಯೆ ರಜನಿ ಅಣ್ಣಯ್ಯ, ಜೆಡಿಎಸ್ ಮುಖಂಡ ಮಾದೇಗೌಡ, ಕೆಪಿಟಿಸಿಎಲ್ ಅಧೀಕ್ಷಕ ಎಂಜಿನಿಯರ್ ಉಮೇಶ್ ಕುಮಾರ್, ರಮೇಶ್ ಕಳ್ಳಿಪಾಳ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

