ಮೈಸೂರು

ಪೂರ್ಣ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Published On :

ಮೈಸೂರು: ಭೂ ಸ್ವಾಧೀನಪಡಿಸಿಕೊಂಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಎಂಡಿಎ) ರೈತರಿಗೆ ಪೂರ್ಣ ಪ್ರಮಾಣದ ಪರಿಹಾರ ಒದಗಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯವರು ಜೆಎಲ್ಬಿ ರಸ್ತೆಯಲ್ಲಿರುವ ಎಂಡಿಎ ಕಚೇರಿ ಎದುರು ಶನಿವಾರ ಪ್ರತಿಭಟಿಸಿದರು.
ಎಂಡಿಎ 1992ರಿಂದ 1997ರವರೆಗೆ 1956 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಿದೆ. ಆದರೆ, ರೈತರು ನ್ಯಾಯಾಲಯಕ್ಕೆ ಹೋಗಿದ್ದರಿಂದ ಹೆಚ್ಚಿನ ಪರಿಹಾರ ತೀರ್ಮಾನವಾಗಿದೆ. ಆದರೆ, ಎಂಡಿಎ ಪೂರ್ಣ ಪ್ರಮಾಣದಲ್ಲಿ ರೈತರಿಗೆ ಪರಿಹಾರ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ರೈತರ ಭೂಸ್ವಾಧೀನ ಕಾಯ್ದೆ ಪ್ರಕಾರ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿ ಪರಿಹಾರ ಪಾವತಿಸಬೇಕು.  ಅನುಮತಿ ಮೇರೆಗೆ ಜಮೀನು ನೀಡಿರುವ ರೈತರಿಗೆ ಕಾನೂನು ಪ್ರಕಾರ ನಿವೇಶನ ವಿತರಿಸಬೇಕು ಎಂದು ಒತ್ತಾಯಿಸಿದರು. ಎಂಡಿಎ ವ್ಯಾಪ್ತಿಗೆ ಬರುವ ಗ್ರಾಮಗಳ ಗ್ರಾಮ ಠಾಣೆ ವ್ಯಾಪ್ತಿಗೆ ಬರುವ ಹಾಲಿ ಮನೆ ಕಟ್ಟಿಕೊಂಡಿರುವ ಮತ್ತು ಖಾಲಿ ನಿವೇಶನಗಳನ್ನು ಸರ್ವೆ ನಂಬರ್ಗಳಲ್ಲಿ ಇದೆ. ಅದನ್ನು ಸಹ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಮಾಡಿರುವುದನ್ನು ಕೈಬಿಡಬೇಕು. ಭೂಮಿ ಕಳೆದುಕೊಂಡ ರೈತರಿಗೆ ಎಂಡಿಎ ನಿವೇಶನ ಹಂಚುವಾಗ ಪ್ರಥಮ ಆದ್ಯತೆ ಕೊಟ್ಟು ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.

ರೈಲಿಗೆ ಸಿಕ್ಕಿ ವ್ಯಕ್ತಿ ಸಾವು
ಮೈಸೂರು: ಬೆಳಗೊಳ- ಸಾಗರಕಟ್ಟೆ ರೈಲು ನಿಲ್ದಾಣಗಳ ಮಧ್ಯೆ 50 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಚಹರೆ- 5.6 ಅಡಿ ಎತ್ತರ, ದೃಢಕಾಯ, ಕಪ್ಪು ಮೈಬಣ್ಣ, ದುಂಡು ಮುಖ, ಕಿವಿ ಚುಚ್ಚಿರುತ್ತದೆ. ಪಾಚಿ ಬಣ್ಣದ ಅರ್ಧ ತೋಳಿನ ಶರ್ಟ್, ನೀಲಿ ಚೌಕಳಿಗಳಿರುವ ಕಾಟನ್ ಲುಂಗಿ, ಸೊಂಟದಲ್ಲಿ ಕಪ್ಪು ಉಡುದಾರ ಧರಿಸಿದ್ದಾರೆ.ದೇಹವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದೆ. ವಾರಸುದಾರರು ಇದ್ದಲ್ಲಿ ದೂ. 0821- 2516579 ಸಂಪರ್ಕಿಸಬಹುದು.
ಯುವಕ ಆತ್ಮಹತ್ಯೆ
ಮೈಸೂರು: ದಾವಣಗೆರೆ ಯುವಕನೊಬ್ಬ ರೈಲು ಹಳಿಗಳ ಮೇಲೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗೊಳ ಸಮೀಪ ಶುಕ್ರವಾರ ನಡೆದಿದೆ. ದಾವಣಗೆರೆ ಜಿಲ್ಲೆಯ ಯರಗಂಟೆ ಗ್ರಾಮದ ಛಾಯಾಗ್ರಾಹಕ ಬಸವರಾಜ್ ಎಂಬವರ ಪುತ್ರ ಬಿ. ಲೋಹಿತ್ (18) ಆತ್ಮಹತ್ಯೆ ಮಾಡಿಕೊಂಡವರು. ಮೈಸೂರು ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.