'ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಅಚ್ಚರಿ ಫಲಿತಾಂಶ'
ಗುಂಡ್ಲುಪೇಟೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ 12 ಕ್ಷೇತ್ರದಲ್ಲಿ ಜೆಡಿಎಸ್ ಗೆಲವು ಸಾಧಿಸುವ ಮೂಲಕ ಅಚ್ಚರಿ ಮೂಡಿಸಲಿದೆ ಎಂದು ಚಾಮರಾಜನಗರ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ, ಮಾಜಿ ಸಚಿವ ಕೋಟೆ ಶಿವಣ್ಣ ಭವಿಷ್ಯ ನುಡಿದರು.
ತಾಲೂಕಿನ ಬೇಗೂರು ಗ್ರಾಮದಲ್ಲಿ ಏರ್ಪಡಿಸಿದ್ದ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ತಮ್ಮ ಗೆಲವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಿಕೆಟ್ ಕೇಳುವ ಮುನ್ನ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹಾಗು ಪಕ್ಷದ ಮುಖಂಡರ ಅಭಿಪ್ರಾಯ ನೋಡಿದಾಗ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಗೆ ಸ್ಪರ್ಥಿಸಲಿದ್ದೇನೆ ಹಾಗೂ ಇದು ನನ್ನ ಕರ್ಮ ಭೂಮಿ, ಎಚ್.ಡಿ.ಕೋಟೆಯಲ್ಲಿ ಈ ಭಾರಿಯ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಓಟು ಬರಲಿದ್ದು, ನಂಜನಗೂಡು, ಟಿ.ನರಸೀಪುರ, ಹನೂರು ಕ್ಷೇತ್ರದಲ್ಲಿ ಸಮಬಲದ ಓಟು ಬರಲಿದೆ ಎಂದರು.
ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಬಿ.ಪಿ.ಮುದ್ದುಮಲ್ಲು. ಚಾ.ನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜೆ.ಶಿವಮೂರ್ತಿ, ಮೈಸೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ಬಾಬು, ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ. ಕೃಷ್ಣಮೂರ್ತಿ ಮಾತನಾಡಿದರು.
ಭೋಗಯ್ಯನಹುಂಡಿ, ಕುರುಬರಹುಂಡಿ, ಚನ್ನವಡೆಯನಪುರ ಗ್ರಾಮದ ನೂರಾರು ಮಂದಿ ವಿವಿಧ ಪಕ್ಷ ತೊರೆದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಬಿ.ಪಿ. ಮುದ್ದುಮಲ್ಲು ನಾಯಕತ್ವ ಒಪ್ಪಿ ಜೆಡಿಎಸ್ಗೆ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

