ಮೈಸೂರು

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಸಿದ್ಧತಾ ಶಿಬಿರ

Published On :

ಕೆ.ಆರ್. ನಗರ: ತಾಲೂಕು ನಾಮಧಾರಿಗೌಡ ನೌಕರರ ಸಂಘದ ವತಿಯಿಂದ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಉಚಿತ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರ ಏರ್ಪಡಿಸಲಾಗಿತ್ತು.
ತಾಲೂಕಿನ ವಿವಿಧ ಪ್ರೌಢಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಪರೀಕ್ಷೆಯನ್ನು ಒತ್ತಡದಿಂದ ಎದುರಿಸುತ್ತಿರುವ ಬಗ್ಗೆ ಮತ್ತು ಅದಕ್ಕೆ ಪರಿಹಾರ ಮಾರ್ಗಗಳನ್ನು ನುರಿತ ಶಿಕ್ಷಕರು ತಿಳಿಸಿಕೊಟ್ಟರು. ಮಾದರಿ ಪರೀಕ್ಷೆಯನ್ನು ನಡೆಸಿ ರಸಪ್ರಶ್ನೆ ಸ್ಫರ್ಧೆಗಳನ್ನು ನಡೆಸಿ ವಿದ್ಯಾರ್ಥಿಗಳಲ್ಲಿರುವ ಪರೀಕ್ಷಾ ಭಯವನ್ನು ದೂರ ಮಾಡುವ ಬಗ್ಗೆ ಟಿಪ್ಸ್ ನೀಡಿದರು.
ಸಂಘದ ಖಜಾಂಚಿ ಪುರುಷೋತ್ತಮ ಮಾತನಾಡಿ, ಎರಡು ಭಾನುವಾರಗಳು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಶಿಬಿರ ನಡೆಸಿದ್ದು, ಜೂನ್‌ನಲ್ಲಿ ನಪಾಸಾದ ವಿದ್ಯಾರ್ಥಿಗಳಿಗೆ 10 ದಿನಗಳ ಕಾಲ ಶಿಬಿರ ಏರ್ಪಡಿಸಲು ಸಂಘ ತೀರ್ಮಾನಿಸಿದೆ ಎಂದರು. ಸಂಘದ ಅಧ್ಯಕ್ಷ ಎಂ.ಆರ್. ಪುಟ್ಟರಾಜು, ಉಪಾಧ್ಯಕ್ಷ ಚಾಮರಾಜು, ನಿರ್ದೇಶಕರಾದ ರಾಜು, ಈಶ್ವರ್, ಶಿಬಿರದ ಉಪನ್ಯಾಸಕರಾದ ನಾಗೇಂದ್ರಪ್ಪ, ಗಿರಿಜಮ್ಮ, ಪ್ರಭಾಕರಮೂರ್ತಿ, ಕೆ.ಸಿ. ಧ್ರುವರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.