ದೇಶದ ಶೇ.86 ಜನ ನ್ಯಾಯಾಲಯಕ್ಕೆ ಬರುತ್ತಿಲ್ಲ: ನ್ಯಾ. ಡಿ.ಎಚ್. ವಘೇಲಾ
ಮೈಸೂರು: ದೇಶದಲ್ಲಿ ಶೇ.14 ಜನ ಮಾತ್ರ ನ್ಯಾಯಕ್ಕಾಗಿ ನ್ಯಾಯಾಲಯಕ್ಕೆ ಬರುತ್ತಿದ್ದಾರೆ. ಉಳಿದ ಶೇ.86 ಜನ ನ್ಯಾಯಾಲಯಕ್ಕೆ ಬರುತ್ತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ಎಚ್. ವಘೇಲಾ ಹೇಳಿದರು.
ನಗರದ ಸಾ.ರಾ. ಕನ್ವೆನ್ಷನ್ ಹಾಲ್ನಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಕೀಲರ ಸಂಖ್ಯೆಯೂ ಸಹ ಹೆಚ್ಚಾಗಬೇಕು: ಪ್ರಕರಣ ದಾಖಲಿಸದಿರುವುದು, ಬೇರೆ ರೀತಿಯಲ್ಲಿ ಇತ್ಯರ್ಥ ಸೇರಿದಂತೆ ವಿವಿಧ ಕಾರಣಗಳಿಂದಾಗಿ ದೇಶದ ಶೇ.86 ಜನರು ನ್ಯಾಯಾಲಯಕ್ಕೆ ಬರುತ್ತಿಲ್ಲ. ಈ ಜನರನ್ನು ಬೇರೆ ಬೇರೆ ಕಾರಣಗಳಾಗಿ ತಡೆಯಲಾಗುತ್ತಿದೆ. ಇವರಿಗೆ ಸರಿಯಾದ ರೀತಿಯಲ್ಲಿ ನ್ಯಾಯ ಸಿಗುತ್ತಿಲ್ಲ ಎಂದು ಅವರು ವಿಷಾದಿಸಿದರು.
ಭಾರತದ ನ್ಯಾಯಾಂಗ ವ್ಯವಸ್ಥೆಯು ಬೆಳವಣಿಗೆ ಹಾದಿಯಲ್ಲಿದೆ. ದೇಶದ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕಿದೆ. ಸಾಮಾನ್ಯ ಜನರಿಗೆ ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ ಒದಗಿಸದಿದ್ದರೇ ನ್ಯಾಯಾಂಗ ವ್ಯವಸ್ಥೆಯೇ ವಿಫಲವಾಗುತ್ತದೆ. ನ್ಯಾಯಾಂಗ ವ್ಯವಸ್ಥೆ ಸುಧಾರಣೆಗೆ ನ್ಯಾಯಾಧೀಶರ, ಸಿಬ್ಬಂದಿ ನೇಮಕ, ಸೌಲಭ್ಯಗಳನ್ನು ಹೆಚ್ಚಿಸಬೇಕು. ಜೊತೆಗೆ ವಕೀಲರ ಸಂಖ್ಯೆಯೂ ಸಹ ಹೆಚ್ಚಾಗಬೇಕು ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

