ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರ: ಮಹದೇವಪ್ರಸಾದ್
ಮೈಸೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಠಗಳ ಕೊಡುಗೆ ಅಪಾರ ಎಂದು ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಹೇಳಿದರು.
ತಾಲೂಕಿನ ಬರಡನಪುರದ ಮಹಾಂತೇಶ್ವರ ಮಠದಲ್ಲಿ ಭಾನುವಾರ ಏರ್ಪಡಿಸಿದ್ದ ಮಹಾಂತ ಸ್ವಾಮಿಗಳ ಸಂಸ್ಮರಣ ರಜತ ಮಹೋತ್ಸವ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬರಡನಪುರ ಮಠಕ್ಕೆ ಬಹಳ ಪ್ರಾಮುಖ್ಯತೆ ಇದೆ. ಮಹಾಂತ ಸ್ವಾಮಿಗಳು ಕಟ್ಟಿ ಬೆಳೆಸಿದ ಈ ಮಠ ಶೈಕ್ಷಣಿಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕರ್ನಾಟಕದಲ್ಲಿ ಮಠ ಮಂದಿರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಮಠಗಳು ಇಲ್ಲದಿದ್ದರೆ ಶೈಕ್ಷಣಿಕವಾಗಿ ಇಷ್ಟು ಪ್ರಗತಿಯನ್ನೂ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.
ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇದಕ್ಕೆ ಕಬಿನಿ ಮತ್ತು ಕೆಆರ್ಎಸ್ ಮೂಲಕ ನೀರು ಪೂರೈಸುವ ಶಾಶ್ವತ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದೇನೆ. ಈ ಭಾಗದ ಸಮಸ್ಯೆ ನಿವಾರಣೆಗೆ ಕಟ್ಟಿ ಬದ್ಧನಾಗಿದ್ದೇನೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

