ಪೊಲೀಸರಿಂದ ಸಾರ್ವಜನಿಕರಿಗೆ ಧೈರ್ಯ ತುಂಬುವ ಕೆಲಸ: ಐಜಿಪಿ
ಹುಣಸೂರು: ಸಮಾಜದ ಉತ್ತಮರಿಗೆ ರಕ್ಷಣೆ, ಅಪರಾಧಿಗಳಿಗೆ ಬಲಪ್ರದರ್ಶನವನ್ನು ಪೊಲೀಸ್ ಪಥ ಸಂಚಲನ ಮಾಡುವ ಮೂಲಕ ಸಾರ್ವಜನಿಕರಿಗೆ ಧೈರ್ಯ ತುಂಬಲಾಗಿದೆ ಎಂದು ದಕ್ಷಿಣ ವಲಯದ ಐಜಿಪಿ ರಾಮಚಂದ್ರರಾವ್ ಹೇಳಿದರು.
ಮುನೇಶ್ವರ ಮೈದಾನದಲ್ಲಿ ಭಾನುವಾರ ನಡೆದ ಪೊಲೀಸ್ ಜನಸ್ನೇಹಿ ಪಥಸಂಚಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜದ ಪ್ರತಿಯೊಬ್ಬರಿಗೂ ರಕ್ಷಣೆ ನೀಡಬೇಕು. ಕಳ್ಳರು, ದರೋಡೆಕೋರರು ಮಾಡವಂಥ ಅಪರಾಧಕ್ಕೂ ತಕ್ಕಪಾಠ ಕಲಿಸುವುದು ಪೊಲೀಸರ ಕರ್ತವ್ಯ. ಇದನ್ನು ಪೊಲೀಸ್ ಜನಸ್ನೇಹಿ ಕಾರ್ಯಕ್ರಮದ ಮೂಲಕ ಜಿಲ್ಲಾ ಪೊಲೀಸ್ ತಂಡ ತೋರಿಸಿದೆ ಎಂದು ಶ್ಲಾಘಿಸಿದರು.
ರಾಜರು ಯುದ್ಧ ಕಾಲದಲ್ಲಿ ಸೈನಿಕರನ್ನು ಸಜ್ಜುಗೊಳಿಸುತ್ತಿದ್ದರು. ಈಗ ದೇಶದ ಭದ್ರತೆಗಾಗಿ ಪೊಲೀಸರ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈಗಲೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ಇದೆ ರೀತಿ ಹಾಸನ, ಅರಸೀಕೆರೆ, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಪೊಲೀಸ್ ಜನಸ್ನೇಹಿ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು.
ಎಸ್ಪಿ ಅಭಿನವ್ ಖರೆ, ಹುಣಸೂರು ಡಿವೈಎಸ್ಪಿ ನಂಜುಂಡ, ನಂಜನಗೂಡು ಡಿವೈಎಸ್ಪಿ ಡಾ. ರಾಜಾ, ಪ್ರೋಬೆಷನರಿ ಐಪಿಎಸ್ ಅಧಿಕಾರಿ ರಾಹುಲ್ ಕುಮಾರ್, ಹುಣಸೂರು ಎಸಿ ಜಗದೀಶ್ ಮತನಾಡಿದರು. ಹುಣಸೂರು ವೃತ್ತ ನಿರೀಕ್ಷಕ ಗಜೇಂದ್ರ ಪ್ರಸಾದ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಭಾನುವಾರ ಬೆಳಗ್ಗೆ ಮುನೇಶ್ವರದ ಮೈದಾನದಲ್ಲಿ ಜಿಲ್ಲಾ ಪೊಲೀಸ್ ತಂಡ ಮತ್ತು ಕೆಎಸ್‌ಆರ್‌ಪಿ ತಂಡದ ಪೊಲೀಸರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ಮಾಡಿದರು. ಸಮಾರಂಭದಲ್ಲಿ ವೃತ್ತ ನಿರೀಕ್ಷಕರಾದ ಪ್ರಸನ್ನ, ಶಿವಮಲ್ಲಯ್ಯ, ಪುರಸಭೆ ಸದಸ್ಯರು, ಸಾರ್ವಜನಿಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

