ಪ್ರತಿಭಟನಾ ಸ್ಥಳಕ್ಕೆ ಶಾಸಕರ ಭೇಟಿ
ಎಚ್.ಡಿ. ಕೋಟೆ: ಕಬಿನಿ ಹಿನ್ನೀರಿನ ರೈತರು ಕಳೆದ ಏಳು ದಿನಗಳಿಂದ ತಾಲೂಕು ಕಚೇರಿ ಮುಂಭಾಗ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭಾನುವಾರ ಶಾಸಕ ಚಿಕ್ಕಮಾದು, ಮಾಜಿ ಸಚಿವ ಎಂ. ಶಿವಣ್ಣ ಭೇಟಿ ನೀಡಿ ಸಮಸ್ಯೆ ಆಲಿಸಿದರು.
ಇದೇ ವೇಳೆ ಉಪ ವಿಭಾಗಾಧಿಕಾರಿ ಜಗದೀಶ್ ಪ್ರತಿಭಟನೆಯನ್ನು ಹಿಂಪಡೆಯುವಂತೆ ಕೋರಿದರು. ಪ್ರತಿಭಟನಾಕಾರರು ಸ್ಪಂದಿಸದ ಕಾರಣ ಅವರೇ ಮಾತನಾಡಿ, ನಿಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಅರಣ್ಯ ಇಲಾಖೆಯ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಾದ್ದರಿಂದ ಸಂಬಂಧಪಟ್ಟ ದಾಖಲೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.
ಶಾಸಕ ಎಸ್. ಚಿಕ್ಕಮಾದು ಮಾತನಾಡಿ, ರೈತರ ಸಮಸ್ಯೆಯು ಸಂಪೂರ್ಣವಾಗಿ ಅರ್ಥವಾಗಿದ್ದು ಈ ಕೆಂಚನಹಳ್ಳಿಯಲ್ಲಿ ಭೂಮಿ ನೀಡಲಾಗಿದೆ. ಅಲ್ಲಿ ವ್ಯವಸಾಯ ಮಾಡಲು ಅರಣ್ಯ ಇಲಾಖೆಯವರು ಬಿಡುತ್ತಿಲ್ಲ ಎಂಬುದು ತಮ್ಮ ಅಹವಾಲಾಗಿದೆ. ಈ ಸಂಬಂಧ ಕಂದಾಯ ಮಂತ್ರಿಗಳ ಜತೆ ಚರ್ಚಿಸಿ ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು. ಮುಖಂಡರಾದ ಎಂ.ಸಿ. ದೊಡ್ಡನಾಯಕ, ಜಿಪಂ ಮಾಜಿ ಸದಸ್ಯ ರವಿ, ವೆಂಕಟಸ್ವಾಮಿ, ಮಾಜಿ ತಾಪಂ ಅಧ್ಯಕ್ಷ ಗೋಪಾಲಸ್ವಾಮಿ ಚಾ. ನಂಜುಂಡಮೂರ್ತಿ, ಎಸಿ ಜಗದೀಶ್, ತಹಸೀಲ್ದಾರ್ ಕೃಷ್ಣ, ಅಕ್ಬರ್ ಪಾಷ, ಶಿವಣ್ಣ, ದೊಡ್ಡಸಿದ್ದು, ಸೋಮೇಶ್, ಸಬಪ್ಪ, ಶಿವಯ್ಯ, ಚೌಡಹಳ್ಳಿ ಜವರಯ್ಯ, ಚಾ. ಶಿವಕುಮಾರ್, ಲಾರಿ ಪ್ರಕಾಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

