ಬೈಕ್ಗೆ ಬಸ್ ಡಿಕ್ಕಿ; ಇಬ್ಬರ ಸಾವು
ಹುಣಸೂರು: ಬೈಕ್ ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರೇಮಿಗಳು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ತಾಲೂಕಿನ ಸೋಮನಹಳ್ಳಿ ಬಳಿ ನಡೆದಿದೆ.
ಮೈಸೂರು ಇನ್ಫೋಸಿಸ್ ಕಂಪನಿಯ ಗುತ್ತಿಗೆ ನೌಕರ ಯರಗನಹಳ್ಳಿ ನಿವಾಸಿ ನಂಜುಂಡನಾಯಕ ಎಂಬವರ ಪುತ್ರ ನವೀನ್(35) ಮಹದೇಶ್ವರ ಬಡಾವಣೆಯ ಪವಿತ್ರ(25) ಮೃತಪಟ್ಟವರು. ಮೈಸೂರು ಇನ್ಫೊಸಿಸ್ ಕಂಪನಿ ಗುತ್ತಿಗೆ ಅಡುಗೆ ಸಿಬ್ಬಂದಿ ಪವಿತ್ರ ಮತ್ತು ಕ್ಯಾಷಿಯರ್ ನವೀನ್ ಎಂಬವರು ನಾಗರಹೊಳೆಗೆ ತೆರಳಲು ಭಾನುವಾರ ಬೆಳಗ್ಗೆ ತಮ್ಮ ಬೈಕ್ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತೀವ್ರ ಪೆಟ್ಟು ಬಿದ್ದು ಇಬ್ಬರೂ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುರಸಭೆ ಚುನಾವಣೆ; ಪ್ರಚಾರ
ಕೆ.ಆರ್. ನಗರ: ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಬಡವರ ಪರ ಯೋಜನೆಗಳನ್ನು ಮೆಚ್ಚಿ ಮತದಾರರು ತಮಗೆ ಬೆಂಬಲ ನೀಡಲಿದ್ದಾರೆ ಎಂದು ಪಟ್ಟಣದ 15ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು. ಮಾ.2ರಂದು ನಡೆಯುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅವರು ಭಾನುವಾರ ಮನೆ ಮನೆಗೆ ತೆರಳಿ ಮತ ಯಾಚಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹತ್ತಾರು ವರ್ಷಗಳಿಂದ ವಾರ್ಡಿನ ಮತದಾರರೊಂದಿಗೆ ತಾವು ಉತ್ತಮ ಬಾಂಧವ್ಯ ಹೊಂದಿದ್ದು, ನನ್ನನ್ನು ಚುನಾಯಿಸಿದರೆ ಮೂಲಭೂತ ಸವಲತ್ತುಗಳು ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ದುಡಿಯುವುದಾಗಿ ತಿಳಿಸಿದರು. ಮುಖಂಡರಾದ ಉಮಾಶಂಕರ, ಕೆ.ಎಸ್. ಸಿದ್ದೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

