ಮೈಸೂರು

ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಚಿಕ್ಕಮಾದು

Published On :

ಎಚ್.ಡಿ. ಕೋಟೆ: ತಾಲೂಕಿನ ಪ್ರಮುಖ ರಸ್ತೆಗಳು ತೀರಾ ಹದಗೆಟ್ಟಿದ್ದು, ಈ ರಸ್ತೆಗಳನ್ನು ಆದ್ಯತೆ ಮೇರೆಗೆ ತೆಗೆದುಕೊಂಡು ಅಭಿವೃದ್ಧಿಪಡಿಸುವುದಾಗಿ ಶಾಸಕ ಎಸ್. ಚಿಕ್ಕಮಾದು ಹೇಳಿದರು.
ತಾಲೂಕಿನ ಪುರದಕಟ್ಟೆಯಿಂದ ಹೂವಿಕೊಳ ಗ್ರಾಮಕ್ಕೆ ಹೋಗುವ ರಸ್ತೆಯನ್ನು 1 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಾವು ಶಾಸಕನಾಗಿ ಆಯ್ಕೆಯಾದ ಮೇಲೆ 32 ಗ್ರಾಪಂಗಳ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ ಗ್ರಾಮಗಳಿಗೆ ಮತ್ತು ರಸ್ತೆಗಳ ಅಭಿವೃದ್ಧಿ ಆಗಬೇಕಾದ್ದನ್ನು ಪರಿಶೀಲಿಸಿದ್ದೇನೆ ಎಂದರು.
ಸಂಸದ ಆರ್. ಧ್ರುವನಾರಾಯಣ, ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿ ತಾಲೂಕಿನ ಯಡಿಯಾಲದಿಂದ ಬಡಗಲಪುರದವರೆಗಿನ ರಸ್ತೆಗಳ ಅಭಿವೃದ್ಧಿಗೆ ಅನುಧಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಗುತ್ತಿಗೆದಾರರು ಗುಣ ಮಟ್ಟದಲ್ಲಿ ರಸ್ತೆ ನಿರ್ಮಿಸುವುದರ ಜತೆಗೆ ಮಳೆಗಾಲಕ್ಕೂ ಮುಂಚೆ ನಿರ್ಮಿಸುವಂತೆ ಸೂಚಿಸಿದರು. ಬಹಳ ವರ್ಷಗಳ ಹಿಂದೆ ಆಗಬೇಕಾಗಿದ್ದ ಸರಗೂರಿನಿಂದ ಯಡಿಯಾಲದವರೆಗಿನ 14 ಕಿ.ಮೀ. ರಸ್ತೆಯನ್ನು 8.5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಸದಸ್ಯೆ ಭಾಗ್ಯಲಕ್ಷ್ಮಿ, ಸರಗೂರು ಬ್ಲಾಕ್ ಅಧ್ಯಕ್ಷ ರವಿ, ಮುಖಂಡರಾದ ಮಾಜಿ ಪ್ರಧಾನ ಎಂ.ಸಿ. ದೊಡ್‌ಡನಾಯಕ, ಬಸವರಾಜು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ದಾಸಪ್ಪ, ಅಶೋಕ್, ಪಿಡಬ್ಲ್ಯುಡಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜು, ಮಹೇಶ್ ರಾಜು, ಲಕ್ಷ್ಮಿನಾರಾಯಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.