ರಾಜ್ಯದಲ್ಲೂ ಲೋಕಪಾಲ್ ಮಾದರಿ ವಿಧೇಯಕ ಜಾರಿಗೆ ಚಿಂತನೆ: ಸಿಎಂ
ಮೈಸೂರು: ರಾಜ್ಯದಲ್ಲೂ ಕೇಂದ್ರದ ಲೋಕಪಾಲ್ ಮಾದರಿ ವಿಧೇಯಕ ಜಾರಿಗೆ ಚಿಂತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್ನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಆದರೆ ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿಯೇ ತರಾತುರಿಯಲ್ಲಿ ಲೋಕಾಯುಕ್ತ ತಿದ್ದುಪಡಿ ವಿಧೇಯಕ ಮಂಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಬಾರಿ ಬಜೆಟ್ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಏ.1ರಿಂದ ಜಾರಿಯಾಗಲಿವೆ. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದರೂ ಈಗಾಗಲೇ ಪ್ರಕಟಿಸಿರುವ ಹಾಗೂ ನಡೆಯುತ್ತಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಯಾವುದೇ ಅಡ್ಡಿ ಇಲ್ಲ. ಆದರೆ ಹೊಸ ಕಾರ್ಯಕ್ರಮಗಳನ್ನು ಮಾತ್ರ ಘೋಷಿಸಬಾರದು ಎಂದು ಅವರು ಹೇಳಿದರು. ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಹಣ ಬಿಡುಗಡೆ ಮಾಡಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ 7 ತಾಸು ತ್ರಿಫೇಸ್ ವಿದ್ಯುತ್ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ತಮ್ಮ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಆರೋಪಗಳ ಸಂಬಂಧ ತನಿಖೆ ನಡೆಸುವಂತೆ ಮಾಜಿ ಸಚಿವ ರಾಮದಾಸ್ ಅವರು ಬರೆದಿರುವ ಪತ್ರ ತಮಗೆ ಬಂದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಚಿಕಿತ್ಸೆಗೆ ಅಂಬರೀಷ್ ಸ್ಪಂದನೆ: ವಸತಿ ಸಚಿವ ಎಂ.ಎಚ್. ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಡಿವಿಎಸ್ ಸ್ಪರ್ಧಿಸಲಿ: ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಮಾರ್ಚ್ ಮೊದಲ ವಾರ ಬಿಡುಗಡೆಯಾಗಲಿದೆ. ಒಂದಿಬ್ಬರು ಸಚಿವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಸಚಿವರು, ಶಾಸಕರ ಸ್ಪರ್ಧೆಯ ಬಗ್ಗೆ ಹೈಕಮಾಂಡ್ ತೀರ್ಮಾನಿಸಬೇಕಾಗಿದೆ ಎಂದು ಅವರು ಹೇಳಿದರು.
ಮೈಸೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ಸ್ಪರ್ಧಿಸಲಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

