ಸರ ಅಪಹರಣಕಾರನ ಬಂಧನ; 3 ಚಿನ್ನದ ಸರ ವಶ
ಮೈಸೂರು: ನಗರದ ಸಿಸಿಬಿ ಘಟಕ ಪೊಲೀಸರು ಸರ ಅಪಹರಣಕಾರರನನ್ನು ಬಂಧಿಸಿ 2.50 ಲಕ್ಷ ಮೌಲ್ಯದ 3 ಚಿನ್ನದ ಸರ(65 ಗ್ರಾಂ. ತೂಕ) ಹಾಗೂ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ಉದಯಗಿರಿಯ ಶಾಂತಿನಗರ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಪುತ್ರ ಮೊಹಮ್ಮದ್ ಜವಾದ್(25) ಬಂಧಿತ ಆರೋಪಿ. ಈತನು ಮಂಡಿ ಮೊಹಲ್ಲಾದ ಅಶೋಕ ರಸ್ತೆಯಲ್ಲಿ ಸೋಮವಾರ 3 ಚಿನ್ನದ ಸರಗಳನ್ನು ಮಾರಾಟಕ್ಕೆ ಪ್ರಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 3 ಸರ, ಕೃತ್ಯಕ್ಕೆ ಉಪಯೋಗಿಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತನಿಂದ ನಜರ್ಬಾದ್ ಠಾಣೆಯ 2 ಹಾಗೂ ವಿದ್ಯಾರಣ್ಯಪುರಂ ಠಾಣೆಯ 1 ಪ್ರಕರಣ ಪತ್ತೆಯಾಗಿದೆ. ಈತನ ಸಹಚರ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಶೋಧ ಮುಂದುವರೆಸಲಾಗಿದೆ.
ಪೊಲೀಸ್ ಆಯುಕ್ತ ಡಾ. ಎಂ.ಎ. ಸಲೀಂ, ಡಿಸಿಪಿ ಎಂ.ಎಂ. ಮಹದೇವಯ್ಯ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಕೆ.ಎನ್. ಮಾದಯ್ಯ, ಇನ್ಸ್ಪೆಕ್ಟರ್ಗಳಾದ ಪಿ.ಎ. ಸೂರಜ್, ಆರ್. ಜಗದೀಶ್, ಎಸ್ಐ ಶ್ರೀನಿವಾಸಗೌಡ, ಎಎಸ್ಐಗಳಾದ ಎಂ.ಜೆ. ಜಯಶೀಲನ್, ಎಂ.ಡಿ. ಶಿವರಾಜು ಹಾಗೂ ಸಿಬ್ಬಂದಿ ಈ ಪತ್ತೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

