ಮೈಸೂರು

ಹಲ್ಲೆ ಪ್ರಕರಣ ಸಿಐಡಿಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ

Published On :

ಮೈಸೂರು; ಆರ್ಟಿಐ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಆಗ್ರಹಿಸಿ ಪ್ರಜಾಶಕ್ತಿ ಆಂದೋಲನ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ಆರ್ಟಿಐ ಕಾರ್ಯಕರ್ತ ಪುಟ್ಟಸ್ವಾಮಿ ಅ. ರಾಮಚಂದ್ರ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಆರ್ಟಿಐ ಅಡಿಯಲ್ಲಿ ಅವರು ನಗರಪಾಲಿಕೆಯ 26ನೇ ವಾರ್ಡ್ನ ಅಕ್ರಮಗಳ ಮಾಹಿತಿ ಸಂಗ್ರಹಿಸಿ, ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯ ಶಿವಣ್ಣ ಮತ್ತು ಅವರ ಬೆಂಬಲಿಗರ ಪುಟ್ಟಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದರು.
ಈ ಪ್ರಕರಣ ಸಂಬಂಧ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ. ಆದರೆ, ಹಲ್ಲೆಗೆ ಕಾರಣರಾದ ವ್ಯಕ್ತಿಯನ್ನು ಬಂಧಿಸಿಲ್ಲ. ಹೀಗಾಗಿ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಬೇಕು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು. ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ, ವಿವಿಧ ಸಂಘಟನೆಗಳ ಮುಖಂಡರಾದ ಎಚ್.ಎನ್. ನಂಜುಂಡರಾಜು, ಭಾನು ಮೋಹನ್, ಆನಂದ್ಕುಮಾರ್, ವಿನೋದ್, ಲಕ್ಕಪ್ಪಗೌಡ, ಸೋಮಯ್ಯ ಮಲೆಯೂರು, ಶ್ರೀನಿವಾಸ್, ಗೋವಿಂದೇಗೌಡ ಇದ್ದರು.



ಆರೋಪ ಸತ್ಯಕ್ಕೆ ದೂರವಾದದ್ದು: ಸ್ಪಷ್ಟನೆ
ನಗರಪಾಲಿಕೆಯ 26ನೇ ವಾರ್ಡ್ನ ಸದಸ್ಯ ಶಿವಣ್ಣ ಅವರ ವಿರುದ್ಧ ಕೆಲವರು ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾದದ್ದು ಎಂದು ವಾರ್ಡ್ನ ನಿವಾಸಿಗಳಾದ ಜೆ. ಚಂದ್ರಚಾರ್, ಮಲ್ಲಿಕಾರ್ಜುನ, ಗಿರಿಗೌಡ, ಕಾಳೇಗೌಡ, ಎನ್. ಚಂದ್ರು, ಕುಂಟೇಗೌಡ ಸ್ಪಷ್ಟಪಡಿಸಿದ್ದಾರೆ. ಶಿವಣ್ಣ ಅವರು ತಮ್ಮ ವಾರ್ಡ್ನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸದೆ ಅರ ಹೆಸರಿದೆ ಕಳಂಕ ತರುವುದಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.