ಮೈಸೂರು

ಜಿಂಕೆ ಹತ್ಯೆ; ಧರ್ಮೇಶ್ಗೆ ಜಾಮೀನು

Published On :

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಹತ್ಯೆ ಮಾಡಿದ ಆರೋಪದಡಿ ಬಂಧಿತರಾಗಿರುವ ಮೈಸೂರಿನ ಸಿಐಡಿ ಡಿವೈಎಸ್ಪಿ ಟಿ.ಕೆ. ಧರ್ಮೇಶ್ ಸೇರಿದಂತೆ ಆರು ಮಂದಿಗೆ ಮೈಸೂರಿನ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಧರ್ಮೇಶ್ ಮತ್ತು ಇತರರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಪರಿಶೀಲಿಸಿದ ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ 6 ಮಂದಿ ಮೇಲೆ ಜ.30 ಮಧ್ಯರಾತ್ರಿ ಬಂಡೀಪುರದ ಓಂಕಾರ ಅರಣ್ಯ ವಲಯವನ್ನು ಅಕ್ರಮವಾಗಿ ಪ್ರವೇಶಿಸಿ, ಜಿಂಕೆ ಹತ್ಯೆ ಮಾಡಿದ ಆರೋಪವಿದೆ. ಅರಣ್ಯ ಇಲಾಖೆಯವರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ನಡುವೆ ಆರೋಪಿ ಪರ ವಕೀಲರು ನಂಜನಗೂಡಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅರಣ್ಯ ಇಲಾಖೆಯು ಫೆ.3ರಂದು ಆಕ್ಷೇಪಣೆ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ವಿಚಾರವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳು ಜಿಲ್ಲಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.