ಪಿಯು ಉಪನ್ಯಾಸಕರ ವೇತನ ಪರಿಷ್ಕರಣೆಗೆ ಮನವಿ
ಮೈಸೂರು: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ಶ್ರೇಣಿಯ ಪರಿಷ್ಕರಣೆಯಲ್ಲಿನ ತಾರತಮ್ಯ ನಿವಾರಿಸುವಂತೆ ಸಂಸದ ಎಚ್. ವಿಶ್ವನಾಥ್ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘದ ಪದಾಧಿಕಾರಿಗಳ ಜೊತೆಗೂಡಿ ರಾಮಕೃಷ್ಣನಗರದ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿದ ವಿಶ್ವನಾಥ್, ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ಶ್ರೇಣಿಯ ಪರಿಷ್ಕರಣೆಯಲ್ಲಿನ ತಾರತಮ್ಯದ ಹಿನ್ನೆಲೆಯಲ್ಲಿ ಜಿ. ಕುಮಾರ್ನಾಯಕ್ ಅವರು ನೀಡಿದ ವರದಿಯನ್ನು ಜಾರಿಗೊಳಿಸಬೇಕು ಎಂದು ಕೋರಿದರು. ಕರ್ನಾಟಕ ಸರ್ಕಾರ 1998 ರವರೆಗೂ ತಹಸೀಲ್ದಾರ್, ಸಹಾಯಕ ಆಯುಕ್ತರು ಮತ್ತು ಪಿಯು ಉಪನ್ಯಾಸಕರುಗಳನ್ನು ಬಿ ಶ್ರೇಣಿಯ ಹುದ್ದೆಗಳೆಂದು ಪರಿಗಣಿಸಿ, ಒಂದೇ ವೇತನ ಶ್ರೇಣಿಯನ್ನು ನೀಡುತ್ತಿತ್ತು. ಆದರೆ, 1998ರ ಬಳಿಕ ಉಪನ್ಯಾಸಕರಿಗೆ ತಾರತಮ್ಯ ಎಸಗಿ ಆಯುಕ್ತರಿಗೆ 30,400ರಿಂದ 51,300 ಮತ್ತು ತಹಸೀಲ್ದಾರರ ವೇತನವನ್ನು 28,100ರಿಂದ 50,100 ಹಾಗೂ ಉಪನ್ಯಾಸಕರ ವೇತನವನ್ನು 22,800 ರಿಂದ 43,200 ತೀರ್ಮಾನಿಸಿದೆ ಎಂದರು. ಹಲವು ವರ್ಷಗಳಿಂದ ಪಿಯು ಉಪನ್ಯಾಸಕರ ಸಮಸ್ಯೆ ಬಗೆಹರಿದಿಲ್ಲ. ತಾವು (ಸಿದ್ದರಾಮಯ್ಯ) ಪ್ರತಿಪಕ್ಷ ನಾಯಕರಾಗಿದ್ದ ವೇಳೆ ಸದನದಲ್ಲಿ ಪಿಯು ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ಪರ ವಾದ ಮಂಡಿಸಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಿರಿ. ಅದರಂತೆ ತಾವು ಈಗ ಈ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಪಿಯು ಕಾಲೇಜುಗಳ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಸಮನ್ವಯ ಸಮಿತಿ ಅಧ್ಯಕ್ಷ ಎಚ್.ಎಸ್. ರವಿಶಂಕರ್, ಕಾಂಗ್ರೆಸ್ ಮುಖಂಡ ಎಂ. ಲಕ್ಷ್ಮಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

