ಸರ್ಕಾರವೇ ಎಲ್ಲ ಕೆಲಸ ಮಾಡಲು ಸಾಧ್ಯವಿಲ್ಲ
ಸಾಲಿಗ್ರಾಮ: ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದರೆ ಎಲ್ಲವೂ ಅಭಿವೃದ್ಧಿಯಾಗುತ್ತೇ ವಿನಾ ಸರ್ಕಾರವೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲವೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಬೆಟ್ಟಹಳ್ಳಿಯಲ್ಲಿ ಮೈಸೂರು ವಿವಿ ಹಾಗೂ ಸಾಲಿಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತವಾಗಿ ಆಯೋಜಿಸಿದ್ದ ಎನ್ನೆಸ್ಸೆಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಚುನಾಯಿತ ಪ್ರತಿನಿಧಿಗಳು ಚುನಾವಣೆಗಳಿಗೆ ಖರ್ಚು ಮಾಡುವ ಹಣವನ್ನು ಅವರು ಪ್ರತಿನಿಧಿಸುವ ಕ್ಷೇತ್ರದ ಅಭಿವೃದ್ಧಿಗೆ ಬಳಸಿ ಅಭಿವೃದ್ಧಿಪಡಿಸುವ ಕೆಲಸ ಮಾಡಬೇಕು. ಗ್ರಾಮದ ಈಶ್ವರ ದೇವಾಲಯವನ್ನು 20 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಕೊಣನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮೋಹನ್ ವಿಶೇಷ ಉಪನ್ಯಾಸ ನೀಡಿದರು. ಶಿಬಿರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಮಹದೇವ ಮತ್ತು ಮಮತ ಅವರಿಗೆ ಅತ್ಯುತ್ತಮ ಸ್ವಯಂ ಸೇವಕರೆಂದು ಗೌರವಿಸಲಾಯಿತು.
ಸಿಡಿಸಿ ಸದಸ್ಯರಾದ ಪ್ರೇಮಕುಮಾರ್ ಜೈನ್, ಜ್ಯೋತಿಜಯಸೇನ, ಜಿಪಂ ಎಂಜಿನಿಯರ್ ಮಂಜುನಾಥ್, ಎಸ್ಐ ಮಹೇಶ್, ಪ್ರಾಂಶುಪಾಲ ಪ್ರೊ.ಎಸ್.ಜಿ. ಪ್ರಕಾಶ್, ಪ್ರಾಧ್ಯಾಪಕರಾದ ಶಂಕರ್, ದೇವಮ್ಮಣಿ, ಎನ್ಎಸ್ಎಸ್ ಅಧಿಕಾರಿ ಕುಮಾರ್, ಗ್ರಾಪಂ ಉಪಾಧ್ಯಕ್ಷ ಬಿ.ಆರ್. ಶ್ರೀಧರ್, ಮಾಜಿ ಅಧ್ಯಕ್ಷ ಬಿ.ಸಿ. ಯೋಗೇಶ್, ಮಾಜಿ ಸದಸ್ಯ ರಮೇಶ್, ಡೇರಿ ಕಾರ್ಯದರ್ಶಿ ದಿನೇಶ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

