ಮೈಸೂರು

'ಕಾಲೇಜುಗಳಲ್ಲಿ ಕ್ರೀಡಾ ಶಿಕ್ಷಣ ಕಡ್ಡಾಯವಾಗಲಿ'

Published On :

ಮೈಸೂರು: ಪದವಿ ಕಾಲೇಜುಗಳಲ್ಲಿ ಕ್ರೀಡಾ ಶಿಕ್ಷಣ ಕಡ್ಡಾಯವಾಗಬೇಕು ಎಂದು ಬೆಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಅಧ್ಯಕ್ಷ ಪ್ರೊ.ಎಲ್.ಆರ್. ವೈದ್ಯನಾಥನ್ ಹೇಳಿದರು.
ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿರುವ ದೈಹಿಕ ಶಿಕ್ಷಣದ ಪ್ರಸ್ತುತತೆ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಬುಧವಾರ ಅವರು ಮುಖ್ಯ ಭಾಷಣ ಮಾಡಿದರು.
ಪದವಿ ಕಾಲೇಜುಗಳಲ್ಲಿ ಕ್ರೀಡಾ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು ಎಂದು ಈ ಹಿಂದೆ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಒತ್ತಾಯಿಸಿದ್ದೆ. ಅದರಂತೆ ಬೆಂಗಳೂರಿನ ಕೆಲವು ಕಾಲೇಜುಗಳಲ್ಲಿ ಕ್ರೀಡಾ ಶಿಕ್ಷಣ ಕಡ್ಡಾಯಗೊಳಿಸಿದ್ದರು. ಕ್ರೀಡಾ ಶಿಕ್ಷಣಕ್ಕೆ ಎಲ್ಲ ವಿಷಯದೊಡನೆ ಸಂಬಂಧ ಇದೆ ಎಂದರು.
ಪದವಿ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಆರಂಭಿಸಿದರೆ ಪತ್ರಿಕೋದ್ಯಮ ವಿದ್ಯಾರ್ಥಿಯೊಬ್ಬ ಮುಂದೊಂದು ದಿನ ಉತ್ತಮ ಕ್ರೀಡಾ ವರದಿಗಾರನಾಗಬಹುದು. ಪೌಷ್ಟಿಕ ಆಹಾರ, ಹಿತಮಿತ ಆಹಾರ ಸೇವನೆ ಮುಂತಾದವೂ ಕ್ರೀಡೆಗೆ ಸಹಕಾರಿ ಆಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಸಹ ಪ್ರತಿ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಭಾಗವಹಿಸುವಂತೆ ಆಗಬೇಕು ಎಂದು ಹೇಳಿದೆ. ಆದರೆ ನಮ್ಮ ಪದವಿ ಕಾಲೇಜುಗಳಲ್ಲಿ ಶೇ.10ರಷ್ಟು ಮಂದಿ ವಿದ್ಯಾರ್ಥಿಗಳು ಮಾತ್ರ ಕ್ರೀಡೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಉಳಿದಂತೆ ಶೇ.90ರಷ್ಟು ಮಂದಿ ಕ್ರೀಡೆಯಿಂದ ವಿಮುಖರಾಗಿದ್ದಾರೆ ಎಂದರು.
ವಿಚಾರ ಸಂಕಿರಣ ಉದ್ಘಾಟಿಸಿದ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ಮಾತನಾಡಿ, ಎಲ್ಲ ದೈಹಿಕ ಶಿಕ್ಷಕರು ಸದೃಢ ದೇಹ ಹೊಂದಿಲ್ಲದಿರುವುದು ವಿಪರ್ಯಾಸ. ಇತ್ತೀಚೆಗೆ ಬಹುಪಾಲು ಮಂದಿ ಕ್ರೀಡಾ ಚಟುವಟಿಕೆಗಳಿಂದ ವಿಮುಖರಾಗುತ್ತಿದ್ದಾರೆ. ಈಗ ದುಬಾರಿ ಕ್ರೀಡೆಗಳು ಹೆಚ್ಚಾಗಿ ಸಾಂಪ್ರದಾಯಕ ಕ್ರೀಡೆಗಳು ಕಡಿಮೆ ಆಗುತ್ತಿದೆ. ಇಂದಿನ ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಕ್ರೀಡೆಯನ್ನು ಎಲ್ಲರೂ ಮರೆಯುತ್ತಿದ್ದಾರೆ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ಪುರುಷೋತ್ತಮ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಕೆ. ಸಂಗೀತಾ ಮತ್ತು ಸಂಚಾಲಕಿ ಟಿ.ಎಸ್. ಯಶೋದಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.