ವೇಶ್ಯಾವಾಟಿಕೆ; ಮೂವರ ಸೆರೆ
ಮೈಸೂರು: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ನಗರದ ಸಿಸಿಬಿ ಘಟಕದ ಪೊಲೀಸರು ಬಂಧಿಸಿ, ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಸೋಮವಾರ ನಡೆದಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ನಗರದ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಲಷ್ಕರ್ ಮೊಹಲ್ಲಾದ ಚೇತನ (27), ಮಂಡಿ ಮೊಹಲ್ಲಾದ ಚಂದ್ರಶೇಖರ (27) ಹಾಗೂ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಚಿಕ್ಕಾಡೆ ನಿವಾಸಿ ಸಿ.ಕೆ. ನಂದೀಶ (23) ಬಂಧಿತರು. ವೇಶ್ಯಾವಾಟಿಕೆಗೆ ತೊಡಗಿಸಿದ್ದ ಮೂವರು ಮಹಿಳೆಯರನ್ನು ರಕ್ಷಿಸಿ, ಬಂಧಿತರ ವಶದಲ್ಲಿದ್ದ 5,500, ಕಾರು, ದ್ವಿಚಕ್ರವಾಹನಗಳು, ಚಿನ್ನದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ನಜರ್ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಆಯುಕ್ತ ಡಾ.ಸಲೀಂ, ಡಿಸಿಪಿ ಮಹದೇವಯ್ಯ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮಾದಯ್ಯ, ಇನ್ಸ್ಪೆಕ್ಟರ್ಗಳಾದ ಸೂರಜ್, ಜಗದೀಶ್, ಎಸ್ಐ ಶ್ರೀನಿವಾಸಗೌಡ, ಎಎಸ್ಐಗಳಾದ ಜಯಶೀಲನ್, ಶಿವರಾಜು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.
ವ್ಯಕ್ತಿ ಸಾವು
ಕೆ.ಆರ್. ಆಸ್ಪತ್ರೆಯ ಎಆರ್ಟಿ ಘಟಕದ ಬಳಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಲೇ. ಮಹಾದೇವಪ್ಪ ಎಂಬವರ ಪುತ್ರ ವಿಜಯ್ ಮೃತರಟ್ಟವರು. ವಿಳಾಸ ತಿಳಿದು ಬಂದಿಲ್ಲ. ವಾರಸುದಾರರು ಇದ್ದಲ್ಲಿ ದೂ. 2418306 ಸಂಪರ್ಕಿಸಲು ದೇವರಾಜ ಠಾಣೆ ಪೊಲೀಸರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

