ಶಿಕ್ಷಕರು ಉತ್ತಮ ಸಮಾಜ ರೂಪಿಸಿ
ಮೈಸೂರು: ದೇಶಕ್ತೆ ಉತ್ತಮ ಪ್ರಜೆಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರ ವೃತ್ತಿಯು ಜವಾಬ್ದಾರಿಯುತವಾದದು ಎಂದು ರಂಗಾಯಣ ಉಪನಿರ್ದೇಶಕ ಎಸ್.ಐ. ಭಾವಿಕಟ್ಟಿ ಅಭಿಪ್ರಾಯಪಟ್ಟರು.
ಶ್ರೀನಟರಾಜ ಪ್ರತಿಷ್ಠಾನದ ವಾತ್ಸಲ್ಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ವ್ಯಕ್ತಿಗತ ಬೆಳವಣಿಗೆಗಿಂತ ಸಾಮುದಾಯಿಕ ಅಭಿವೃದ್ಧಿ ಮುಖ್ಯವೆನಿಸುತ್ತದೆ. ಭಾವಿ ಪ್ರಜೆಗಳಾದ ಮಕ್ಕಳಲ್ಲಿ ಈ ರೀತಿಯ ಮನೋಭಾವನೆ ಬೆಳೆಸುವ ಕಡೆಗೆ ಶಿಕ್ಷಕರು ಗಮನ ಹರಿಸಬೇಕು ಎಂದರು.
ಬದಲಾದ ಕಾಲಮಾನದಲ್ಲಿ ಅಭಿವೃದ್ಧಿಗೊಂಡ ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸಂಸ್ಥೆಗಳು ಯಶಸ್ವಿಯಾಗಿವೆ. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರಗಳಲ್ಲಿ ಶಿಕ್ಷಣ ವಲಯವೂ ಒಂದು. ಪಾಠ, ಪ್ರವಚನ ಹಾಗೂ ತಾಂತ್ರಿಕ ವ್ಯವಸ್ಥೆಗೆ ಅನುಗುಣವಾಗಿ ಶಿಕ್ಷಣ ಸಂಸ್ಥೆಗಳು ಬದಲಾಗುತ್ತ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಬೇಕು. ಶಿಕ್ಷಕರು ವಿಷಯಜ್ಞಾನದಲ್ಲಿ ಪರಿಣತಿ ಸಾಧಿಸಲು ಅಪ್ಡೇಟ್ ಆಗಬೇಕು ಎಂದು ಕಿವಿಮಾತು ಹೇಳಿದರು.
ಮಾನಸಗಂಗೋತ್ರಿ ಶಿಕ್ಷಣಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ.ಡಿ.ಆರ್. ಸರ್ವಮಂಗಳ ಮಾತನಾಡಿ, ಶಿಕ್ಷಣ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ನಡೆಸಲು ಬಂದಿರುವ ತಾವೆಲ್ಲ ಸ್ಪಷ್ಟ ಗುರಿ ಇಟ್ಟುಕೊಳ್ಳಿ. ಶಿಕ್ಷಕರ ವೃತ್ತಿ ಶ್ರೇಷ್ಠತೆ ಹೊಂದಿರುವುದರಿಂದ ಅದಕ್ಕೆ ಪೂರಕವಾಗಿ ಜ್ಞಾನ ಸಂಪಾದಿಸಿಕೊಳ್ಳಬೇಕು. ತಮ್ಮ ವೃತ್ತಿಯನ್ನು ಗೌರವಿಸಿದಾಗ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಮಕ್ಕಳನ್ನು ಪ್ರೀತಿಯಿಂದ ಕಂಡು ಅವರಲ್ಲಿ ಸಂಸ್ಕಾರ ಬೆಳೆಸಬೇಕು ಎಂದು ಸಲಹೆ ನೀಡಿದರು.
ಹೊಸಮಠದ ಅಧ್ಯಕ್ಷ ಶ್ರೀ ಚಿದಾನಂದ ಮಹಾಸ್ವಾಮಿ, ವಾತ್ಸಲ್ಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಎಂ. ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ. ಚಂದ್ರಶೇಖರಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

