ಅಂಗನವಾಡಿ ಕೇಂದ್ರಗಳ ಅನುದಾನ ಹೆಚ್ಚಳ: ಡಾ. ಪ್ರೇಮಾ
ಮೈಸೂರು: ಅಂಗನವಾಡಿ ಕೇಂದ್ರಗಳಿಗೆ ವಾರ್ಷಿಕವಾಗಿ ನೀಡುತ್ತಿದ್ದ ಅನುದಾನವನ್ನು 42 ಸಾವಿರದಿಂದ 1.52 ಲಕ್ಷ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ಪ್ರೇಮಾ ಕಾರ್ಯಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿಯು ಬುಧವಾರ ಏರ್ಪಡಿಸಿದ್ದ ಮೈಸೂರು ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಾರ್ಷಿಕವಾಗಿ ಅಂಗನವಾಡಿ ಕೇಂದ್ರಗಳಿಗೆ 42 ಸಾವಿರ ನೀಡಲಾಗುತ್ತಿದ್ದು, ಇದು ಯಾವುದಕ್ಕೂ ಸಾಕಾಗುತ್ತಿರಲಿಲ್ಲ. ಹೀಗಾಗಿ ಅನುದಾನ ಮೊತ್ತವನ್ನು 1.52 ಲಕ್ಷ ಹೆಚ್ಚಿಸಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಅಲ್ಲದೆ 8ರಿಂದ 10 ದಿನಗಳ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನೀಡುತ್ತಿದ್ದ ಅನುದಾನವನ್ನು 10 ಸಾವಿರದಿಂದ 20 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಆಪ್ತ ಸಮಾಲೋಚನಾ ಕೇಂದ್ರಗಳಲ್ಲಿ ಕೆಲಸ ಮಾಡುವ ನಗರ ಪ್ರದೇಶದ ಸಮಾಲೋಚಕರಿಗೆ 7,000ದಿಂದ 13,000 ಹೆಚ್ಚಿಸಲಾಗಿದೆ. ಗ್ರಾಮೀಣ ಭಾಗದ ಸಮಾಲೋಚಕರಿಗೆ 5,500 ರಿಂದ 12,000 ಸಂಬಳ ಹೆಚ್ಚಿಸಲಾಗಿದ್ದು, ಎಲ್ಲ ಕಾರ್ಯಕ್ರಮಗಳು ಏಪ್ರಿಲ್- ಮೇನಲ್ಲಿ ಜಾರಿಯಾಗಲಿದೆ ಎಂದರು. ಸ್ವಯಂಸೇವಾ ಸಂಸ್ಥೆಗಳ ಕಾರ್ಯ ನಿರ್ವಹಣೆ, ಸರ್ಕಾರದಿಂದ ಅನುದಾನ ಬಿಡುಗಡೆ ಮೊದಲಾದ ವಿಷಯಗಳ ಕುರಿತು ತಿಳಿಯಲು ಇಂಥ ತರಬೇತಿ ಅಗತ್ಯ. ಸಂಸ್ಥೆಗಳ ಕಾರ್ಯ ಚಟುವಟಿಕೆ ಕುರಿತ ದಾಖಲೆ ಮತ್ತು ಲೆಕ್ಕಪತ್ರಗಳ ಸೂಕ್ತ ನಿರ್ವಹಣೆ ಮಾಡಿದರೆ ಮಾತ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತದೆ ಎಂದರು.
ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಜಾನ್ ಸಿ. ವರ್ಗೀಸ್, ಯೋಜನಾಧಿಕಾರಿ ಎಂ. ಲೋಕೇಶ್, ಮಹಾತ್ಮ ಗಾಂಧಿ ಟ್ರಸ್ಟ್ನ ಅಧ್ಯಕ್ಷ ಆದಿ ಶೇಷಣ್ಣ ಗೌಡ, ಸಮಾಜ ಸೇವಕರಾದ ಡಾ.ಪಿ.ವಿ. ರತ್ನಾ ಅರಸ್, ರಾಜೀವ್ ಗಾಂಧಿ ಶಿಕ್ಷಣ ಮತ್ತು ಕ್ಷೇಮಾಭಿವೃದ್ಧಿ ಟ್ರಸ್ಟ್ನ ಕಾರ್ಯದರ್ಶಿ ಟಿ. ರಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

