ಮೈಸೂರು

'ಖಾತ್ರಿ ಯೋಜನೆಗೆ ರು. 40 ಸಾವಿರ ಕೋಟಿ ಮೀಸಲು'

Published On :

ಯಳಂದೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ  ಈ ಬಾರಿ ಕೇಂದ್ರ ಸರ್ಕಾರ 40 ಸಾವಿರ ಕೋಟಿ ರು.ಗಳನ್ನು ಮೀಸಲಿರಿಸಿದೆ. ಇದರಲ್ಲಿ ರಾಜ್ಯಕ್ಕೆ 3 ರಿಂದ 4 ಸಾವಿರ ಕೋಟಿ ಸಿಗಲಿದ್ದು, ಪ್ರತಿ ಗ್ರಾಮ ಪಂಚಾಯಿತಿಯೂ ಕಡ್ಡಾಯವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಆರ್. ಧ್ರುವನಾರಾಯಣ ಸಲಹೆ ನೀಡಿದರು.
ಅವರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಈ ಯೋಜನೆ ಪ್ರತಿ ಗ್ರಾಮ ಪಂಚಾಯಿತಿಗೂ ವರವಾಗಿದೆ. ಈ ಸಾಲಿನಲ್ಲಿ ತಾಲೂಕಿನಲ್ಲಿ ಒಟ್ಟು 3.30 ಕೋಟಿಗಳನ್ನು ಖರ್ಚು ಮಾಡಲಾಗಿದೆ. ಪ್ರಸಕ್ತ ವರ್ಷದಿಂದ ಸೇವಾ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 16.20 ಲಕ್ಷ ರು. ನಿಗದಿಪಡಿಸಲಾಗಿದೆ. ಇಲ್ಲಿನ ಪಂಚಾಯಿತಿಯು ಎಲ್ಲಾ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೇಂದ್ರ ಸರ್ಕಾರದ ಸರ್ವ ಶಿಕ್ಷಣ ಅಭಿಯಾನ, ರಾಷ್ಟ್ರೀಯ ಕೃಷಿ ಮಿಷನ್, ರಾಷ್ಟ್ರೀಯ ಆರೋಗ್ಯ ಮಿಷನ್ಯೋಜನೆಯು ಸೇರಿದಂತೆ ಹಲವು ಯೋಜನೆಗಳಿಂದ ಸಾವಿರಾರು ಕೋಟಿ ಹಣ ಕೇಂದ್ರದಿಂದ ಬಿಡುಗಡೆಯಾಗುತ್ತಿದ್ದು, ಇದರ ಉದ್ದೇಶ ಸಾಮಾನ್ಯ ಜನರಿಗೂ ಮೂಲ ಸೌಕರ್ಯ ಒದಗಿಸುವುದೇ ಆಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಪ್ರತಿ ವರ್ಷ 1600 ಕೋಟಿ ಹೊರೆ ಬೀಳುತ್ತಿದೆ. ಇದರ ಜೊತೆಗೆ ಕ್ಷೀರಭಾಗ್ಯದಂತಹ ಯೋಜನೆಗಳೂ ಸಹ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಸಹಕಾರಿಯಾಗಿದೆ ಎಂದರು.
ಶಾಸಕ ಎಸ್. ಜಯಣ್ಣ, ಜಿ.ಪಂ. ಅಧ್ಯಕ್ಷ ಯಶೋದಾ, ಪ್ರಭುಸ್ವಾಮಿ, ಜಿ.ಪಂ. ಸದಸ್ಯ ಸಿದ್ಧರಾಜು, ಗ್ರಾ.ಪಂ. ಅಧ್ಯಕ್ಷೆ ರಾಧಾ, ತಾ.ಪಂ. ಅಧ್ಯಕ್ಷೆ ಗಂಗಾಮಣಿ ರೇವಣ್ಣ, ಉಪಾಧ್ಯಕ್ಷ ಮಹೇಶ ಕುಮಾರ್, ಸದಸ್ಯರಾದ ರಾಮಚಂದ್ರ, ಮಹೇಶ್ವರಿ, ರಾಜೇಂದ್ರ, ಗ್ರಾ.ಪಂ. ಸದಸ್ಯರಾದ ಕೆ.ಶಿವಯ್ಯ, ಸಿದ್ದಪ್ಪಸ್ವಾಮಿ, ಆರ್. ಪುಟ್ಟಬಸವಯ್ಯ, ಧನರಾಜು, ಮಹದೇವಸ್ವಾಮಿ, ಸಿದ್ದರಾಜು, ವಿಮಲಾ, ಧನರಾಜು, ಮಹದೇವಸ್ವಾಮಿ, ನಾಗಮಲ್ಲು, ಪುಟ್ಟತಾಯಮ್ಮ, ಮಂಜುಳಾ ಸಿದ್ದರಾಜು, ನಳಿನಿ ನಂಜುಂಡಸ್ವಾಮಿ, ಸುಧಾ ಚಾಮರಾಜು, ಆರ್. ಪುಟ್ಟತಾಯಮ್ಮ, ನಂಜಮ್ಮ, ಗ್ರಾಪಂ ಕಾರ್ಯದರ್ಶಿ ಶಶಿಕಲಾ ಮುಖಂಡರಾದ ರೇವಣ್ಣ, ಮಲ್ಲಿಕಾರ್ಜುನ, ರುಕೆಂಗೋ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.