ಮೈಸೂರು

ಮಾ.3, 4 ರಂದು ಕೃಷಿ ಉತ್ಸವ ಆರಂಭ

Published On :

ಗುಂಡ್ಲುಪೇಟೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಮಾ.3 ಮತ್ತು 4 ರಂದು ಕೃಷಿ ಉತ್ಸವ 2014 ನಡೆಯಲಿದೆ ಎಂದು ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎಸ್.ಮಹೇಶ್ ಹಾಗೂ ಧರ್ಮಸ್ಥಳದ ಗ್ರಾಮೋದಯ ಯೋಜನಾಧಿಕಾರಿ ;ನ್ನಕೇಶವ ತಿಳಿಸಿದರು.
ಮಾ.3 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ತಾಲೂಕು ಪಂಚಾಯತ್ ಕಚೇರಿಯ ಮುಂಭಾಗದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ಆರ್.ಧ್ರುವನಾರಾಯಣ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ತಾಪಂ ಅಧ್ಯಕ್ಷೆ ಪ್ರೇಮ ಅಧ್ಯಕ್ಷತೆ ವಹಿಸಲಿದ್ದು, ಜಿಪಂ ಅಧ್ಯಕ್ಷೆ ಯಶೋಧ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎ.ಎಂ.ಕುಂಜಪ್ಪ, ಧರ್ಮಸ್ಥಳ ಗ್ರಾಮೋದಯ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ.ಶ್ರೀಹರಿ, ಪ್ರಗತಿ ಪರ ಕೃಷಿಕ ಸೈಯದ್ ನಜೀರ್ ಅಹಮದ್, ಮೈಮುಲ್ ಅಧ್ಯಕ್ಷ ಎನ್.ಮಹದೇವಪ್ಪ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಪಿ. ಸುನೀಲ್, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಬಿ.ಪಿ.ಮುದ್ದುಮಲ್ಲು ಭಾಗವಹಿಸಲಿದ್ದಾರೆ.
ವಿಚಾರಗೋಷ್ಠಿ: ಅಂತರ್ಜಲ ವೃದ್ಧಿ ಮತ್ತು ಕೃಷಿಯಲ್ಲಿ ನೀರಿನ ಸದ್ಬಳಕೆಯ ವಿಚಾರಗೋಷ್ಠಿ ಅಧ್ಯಕ್ಷತೆಯನ್ನು ಜಿಲ್ಲಾ ಜಲಾನಯನ ಅಭಿವೃದ್ಧಿ ಅಧಿಕಾರಿ ಕೆ.ಎಂ.ಸೋಮಸುಂದರ್, ಧರ್ಮಸ್ಥಳ ಯೋಜನೆಯ ಕೃಷಿ ನಿರ್ದೇಶಕ ಮನೋಜ್ ಮನಿಜಸ್, ಡಿಎಲ್‌ಡಿಬಿ ಕೇಂದ್ರದ ಸಹಾಯಕ ನಿರ್ದೇಶಕ ಎಲ್.ಜಿ. ಕರಿಬಸವಯ್ಯ ವಿಷಯ ಮಂಡಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ಲಾಭದಾಯಕ ಹೈನುಗಾರಿಕೆ ಮತ್ತು ಉತ್ತಮ ಪಶುಸಂಗೋಪನೆ ವಿಷಯದ ಬಗ್ಗೆ ಗೋಷ್ಠಿ ನಡೆಯಲಿದೆ. ಜಿಪಂ ಸದಸ್ಯ ಪಿ.ಮಹದೇವಪ್ಪ ಹಾಗೂ ಕೃಷಿಕ ಶಂಭುಲಿಂಗಸ್ವಾಮಿ ಭಾಗವಹಿಸಲಿದ್ದಾರೆ.
ಮಾ.4 ರಂದು ಬೆಳಗ್ಗೆ 10ಕ್ಕೆ ಮಹಿಳಾ ಗೋಷ್ಠಿಯಲ್ಲಿ ಮಹಿಳಾ ಸಬಲೀಕರಣ (ಸ್ವಾಸ್ಥ್ಯ ಕುಟುಂಬ ಮತ್ತು ಆರೋಗ್ಯ ನೈರ್ಮಲ್ಯ) ಗೋಷ್ಠಿಯ ಅಧ್ಯಕ್ಷತೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಭಾರತಿ ವಹಿಸಲಿದ್ದು, ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಪಿ. ಶಶಿರೇಖಾ ಹಾಗೂ  ಜಿಪಂ ಮಾಜಿ ಅಧ್ಯಕ್ಷೆ ನಾಗಶ್ರೀಪ್ರತಾಪ್ ವಿಷಯ ಮಂಡಿಸಲಿದ್ದಾರೆ.
ಮ. 12ಕ್ಕೆ ಮಳೆಯಾಶ್ರಿತ ಕೃಷಿ ಮತ್ತು ಮಿಶ್ರ ಬೇಸಾಯದ ಗೋಷ್ಠಿ ಅಧ್ಯಕ್ಷತೆಯನ್ನು ಜಂಟಿ ಕೃಷಿ ನಿರ್ದೇಶಕ ಎಚ್.ಎಸ್.ದೇವರಾಜು ವಹಿಸಲಿದ್ದಾರೆ. ಮ.2 ಗಂಟೆಗೆ ತೋಟಗಾರಿಕೆ ಬೆಳೆಗಳ ಮಾರುಕಟ್ಟೆ ಹಾಗೂ ಮೌಲ್ಯವರ್ಧನೆಯ ಗೋಷ್ಠಿ ಅಧ್ಯಕ್ಷತೆಯನ್ನು ತೋಟಗಾರಿಕೆ ಇಲಾಖೆಯ ಉಪ-ನಿರ್ದೇಶಕ ಬಿ.ಆರ್. ಗಿರೀಶ್, ಕೃಷಿ ಮಾರಾಟ ಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕ ದೀನ್ ದಯಾಳ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಆನಂದ್ ಭಾಗವಹಿಸುವರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.