ಮೋದಿ ಪ್ರಧಾನಿಯಾದ್ರೆ ಜಾತಿ ಸೋಂಕು ನಾಶ
ನಂಜನಗೂಡು: ನರೇಂದ್ರಮೋದಿ ಪ್ರಧಾನಿಯಾದರೆ ದೇಶವನ್ನು ಕಾಡುತ್ತಿರುವ ಜಾತಿಯ ಸೋಂಕು ನಾಶವಾಗಿ ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯ ಎಂದು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಮಂಗಳವಾರ ಸಂಜೆ ಪಟ್ಟಣದ ವಿದ್ಯಾವರ್ಧಕ ಶಾಲಾ ಆವರಣದಲ್ಲಿ ನಮೋ ಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾತಂತ್ರ್ಯಾ ನಂತರ ದೇಶದಲ್ಲಿ ಕಾಂಗ್ರೆಸ್ಸಿನವರೇ ಹೆಚ್ಚು ಅವಧಿ ಆಡಳಿತ ನಡೆಸಿದ್ದಾರೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯ. ಕೇಂದ್ರ ಯುಪಿಎ ಸರ್ಕಾರದ ಸಚಿವರು ಲಕ್ಷಾಂತರ ಕೋಟಿ ಭ್ರಷ್ಟಾಚಾರದಲ್ಲಿ ಸಿಲುಕಿ ದೇಶವನ್ನು ಲೂಟಿ ಮಾಡಿದ್ದಾರೆ. ಆದರೆ ಮೋದಿ ಭವ್ಯ ಭಾರತದ ಕನಸನ್ನು ಹೊಂದಿರುವ ಧೀಮಂತ ಮತ್ತು ಭರವಸೆಯ ನಾಯಕ ಎಂದು ಅವರು ಬಣ್ಣಿಸಿದರು. ಇದೆ ವೇಳೆ ಸ್ವಾತಂತ್ರ್ಯ ಹೋರಾಟಗಾರರಾದ ವೆಂಕಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಮಾದಾಪುರದಲ್ಲಿ ಪಟ್ಟಾಧಿಕಾರ ಮಹೋತ್ಸವ
ಎಚ್.ಡಿ. ಕೋಟೆ: ತಾಲೂಕಿನ ಮಾದಾಪುರದಲ್ಲಿ ಸೋಮವಾರ ಗುರು ಪಟ್ಟಾಧಿಕಾರ ಮಹೋತ್ಸವ ಹಾಗೂ ಶ್ರೀ ಚಂದ್ರಮೌಳೇಶ್ವರ ಸ್ವಾಮಿಗಳ ಗುರುಸ್ಮರಣೆ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು.
ನೂತನ ಗುರುಗಳಿಗೆ ಪಟ್ಟಾಧಿಕಾರ ಮಹೋತ್ಸವವು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಚಾಮರಾಜನಗರ ತಾಲೂಕು ನಲ್ಲೂರು ಗ್ರಾಮದ ಮಮತಾ ಮತ್ತು ಮಹೇಶ್ ಅವರ ಪುತ್ರ ಚಿ. ದರ್ಶನ್ ಎಂ. ಕುಮಾರ್ ಅವರಿಗೆ ಪಟ್ಟಾಧಿಕಾರಿ ನೆರವೇರಿಸಿದರು. ನಂತರ ಮಾದಾಪುರದಲ್ಲಿ ನೂತನ ಸ್ವಾಮೀಜಿ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಮೆರವಣಿಗೆ ನಡೆಯಿತು.
ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರವು ಒಂದೆಡೆ ಜನತೆಗೆ ಉತ್ತಮವಾದ ಕೆಲಸವನ್ನು ಮಾಡುತ್ತಿದೆ. ಮಠ-ಮಾನ್ಯಗಳು ಮತ್ತೊಂದು ಕಡೆ ಮಠಗಳ ಮುಖಾಂತರ ಜನತೆಯಲ್ಲಿ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡುತ್ತಿವೆ ಎಂದರು.
ಶಾಸಕ ಎಸ್. ಚಿಕ್ಕಮಾದು ಮಾತನಾಡಿ, ಜೆಎಸ್ಎಸ್ ಸಂಸ್ಥೆಯು ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ಸರ್ಕಾರ ಕೈಗೊಳ್ಳದ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಾದ ಶಿಕ್ಷಣ, ವೈದ್ಯಕೀಯ, ದಾಸೋಹದಂಥ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮಾದಾಪುರ ಮಠದ ಅಭಿವೃದ್ಧಿಗಾಗಿ ತಮ್ಮ ಶಾಸಕರ ನಿಧಿಯಿಂದ 5 ಲಕ್ಷ ನೀಡುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

