ಮೈಸೂರು

ಇಂದು ಉಪ್ಪಾರ ಯುವ ವೇದಿಕೆ ಉದ್ಘಾಟನೆ

Published On :

ಟಿ. ನರಸೀಪುರ: ಕರ್ನಾಟಕ ರಾಜ್ಯ ಉಪ್ಪಾರ ಯುವ ವೇದಿಕೆ ಉದ್ಘಾಟನಾ ಸಮಾರಂಭ ಫೆ. 28 ರಂದು ಮೈಸೂರಿನಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಲಾಗಿದೆ ಎಂದು ಉಪ್ಪಾರ ಜನಕಲ್ಯಾಣ ಟ್ರಸ್ಟ್‌ನ ಉಪಾಧ್ಯಕ್ಷ ಕಾವೇರಿಪುರ ಶಾಂತರಾಜು ಹೇಳಿದರು. ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಸರಗೂರು ಅಯ್ಯನ ಮಠದ ಚಿನ್ನಸ್ವಾಮಿ ಸ್ವಾಮೀಜಿ, ಮಂಗಲ ಉಪ್ಪಾರ ಪೀಠದ ಮಂಜುನಾಥ ಸ್ವಾಮೀಜಿ, ಶಾಸಕ ಸಿ. ಪುಟ್ಟರಂಗಶೆಟ್ಟಿ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಬಿಜೆಪಿಗೆ ನೇಮಕ
ಮೈಸೂರು: ಬಿಜೆಪಿ ವಕೀಲರ ಪ್ರಕೋಷ್ಠ ಜಿಲ್ಲಾ ಸಂಚಾಲಕರಾಗಿ ಚಾಮುಂಡೇಶ್ವರಿ ಕ್ಷೇತ್ರದ ಇಲವಾಲದ ಉಮೇಶ್‌ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.


ಎಪಿಎಂಸಿ; ಚುನಾವಣೆ ವೇಳಾಪಟ್ಟಿ ಪ್ರಕಟ
ನಂಜನಗೂಡು/ಪಿರಿಯಾಪಟ್ಟಣ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ತೆರವಾಗಿರುವ ಹುರಾ(ಸಾಮಾನ್ಯ) ಮತ್ತು ಕೊಪ್ಪ (ಪರಿಶಿಷ್ಟ ಪಂಗಡ) ಕೃಷಿ ಕ್ಷೇತ್ರ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಾ.3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ. 4ರಂದು ನಾಮಪತ್ರಗಳ ಪರಿಶೀಲನೆ, 6ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆ ದಿನ.  ಮತಗಳ ಎಣಿಕೆಯು ಮಾ.18 ರಂದು ನಡೆಯಲಿದ್ದು, ಮಾ.19 ರಂದು ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಸಿ. ಶಿಖಾ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.