ಮೈಸೂರು

'ಗ್ರಾಮೀಣ ಪ್ರದೇಶದಲ್ಲೂ ಕ್ರೀಡೆಗೆ ಹೆಚ್ಚಿನ ಆಸಕ್ತಿ'

Published On :

ರಾವಂದೂರು: ಗ್ರಾಮೀಣ ಪ್ರದೇಶದಲ್ಲೂ ಕ್ರೀಡೆಗೆ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಜಿಪಂ ಸದಸ್ಯ ಎಸ್.ಎ. ಶಿವಣ್ಣ ತಿಳಿಸಿದರು. ಪಿರಿಯಾಪಟ್ಟಣ ತಾ. ರಾವಂದೂರು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೋಗನಹಳ್ಳಿ ಸೋಮೇಶ್ವರ ಕ್ರಿಕೆಟ್ ಕ್ಲಬ್ ಏರ್ಪಡಿಸಿದ್ದ ಡಾ. ರಾಜ್ ಕಪ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಯುವಕರು ಕ್ರೀಡೆಯ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ ಮತ್ತು ಜಾನಪದ ಕ್ರೀಡೆಗಳ ಅಭಿವೃದ್ಧಿಗೂ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ವಿಎಸ್‌ಎಸ್‌ಎನ್ ಕಾರ್ಯದರ್ಶಿ ವಿಜೇಂದ್ರ ಮಾತನಾಡಿ, ಯುವಕರು ಕ್ರೀಡೆಯ ಮೂಲಕ ಸದೃಢರಾಗಬೇಕು. ಕ್ರೀಡೆಯಲ್ಲಿ ಆಸಕ್ತಿ ತೋರುವುದರಿಂದ ದುಶ್ಚಟಗಳಿಂದ ದೂರ ಉಳಿಯಬಹುದು. ಕ್ರೀಡೆಯಿಂದ ದೇಶದಲ್ಲಿ ಉತ್ತಮ ಸ್ಥಾನಮಾನಗಳಿಸಲು ಸಾಧ್ಯ. ಮಕ್ಕಳ ಕ್ರೀಡಾಸಕ್ತಿಯನ್ನು ಪೋಷಕರು ಅರಿತು ಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಅವರು ಕರೆ ನೀಡಿದರು. ವಿಎಸ್‌ಎಸ್‌ಎನ್ ಅಧ್ಯಕ್ಷ ಬಿ.ಟಿ. ಮರೀಗೌಡ, ಬಿ.ವಿ. ಪುಟ್ಟರಾಜು, ಎಸ್.ಎಸ್. ಅನಿಲ್, ದೇವರಾಜು, ಶಿವಲಿಂಗೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.