ಮಹಿಳೆಯರ ಆರೋಗ್ಯ ಸಮಸ್ಯೆ: ಉಪನ್ಯಾಸ
ಮೈಸೂರು: ಕೊಲಂಬಿಯಾ ಏಷಿಯಾ ಆಸ್ಪತ್ರೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರ ಆರೋಗ್ಯಕ್ಕೆ ಸಂಬಂಧ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿ. ಶಿಖಾ ಉದ್ಘಾಟಿಸಿದರು.
ಅವರು ಮಾತನಾಡಿ, ಕೊಲಂಬಿಯಾ ಏಷಿಯಾ ಹಾಸ್ಪಿಟಲ್ ಮಹಿಳೆಯರಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಯತ್ನಿಸುತ್ತಿರುವುದು ಸಂತಸದ ವಿಷಯ. ಇಂತಹ ಅನೇಕ ಕಾರ್ಯಕ್ರಮಗಳನ್ನು ಮಹಿಳೆಯರಿಗೆ ಆರೋಗ್ಯದ ವಿಷಯದಲ್ಲಿ ಜಾಗೃತಿ ಮೂಡಿಸಲು ನಡೆಸುವುದು ಅಗತ್ಯ. ಇದು, ಮುಂದಿನ ಪೀಳಿಗೆಯಲ್ಲಿ ಆರೋಗ್ಯದ ಬಹಗ್ಗೆ ಅರಿವು ಮೂಡಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೊಲಂಬಿಯಾ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಅನುಪಮಾ ರೋಹಿಡೇಕರ್ ಉಪನ್ಯಾಸ ನೀಡಿ, ಸೆರ್ವಿಕಲ್ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಪಾಲಿಸಿಸ್ಟಿಕ್ ಒವರಿ ಸಿಂಡ್ರೋಮ್ ಸೇರಿದಂತೆ ಅನೇಕ ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಂದ ಭಾರತದಲ್ಲಿ ಮಧ್ಯಮ ವಯಸ್ಸಿನ ಮಹಿಳೆಯರು ಬಳಲುತ್ತಿದ್ದಾರೆ ಎಂಬುದು ಅನೇಕ ಜನರಿಗೆ ತಿಳಿದಿಲ್ಲ. ಮಹಿಳೆಯರಿಗೆ ಈ ಕುರಿತು ಭಾರತದಲ್ಲಿ ಸಾಕಷ್ಟು ಜಾಗೃತಿ ಇಲ್ಲ. ಮಹಿಳೆಯರು ತಮ್ಮ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಹೇಳಿದರು. ವೈದ್ಯಕೀಯ ಕ್ಷೇತ್ರದಲ್ಲಿನ ಪ್ರಗತಿಯ ನಡುವೆಯೂ ಭಾರತದಲ್ಲಿ ಮಹಿಳೆಯರು ಕ್ಯಾನ್ಸರ್ ಸೇರಿದಂತೆ ವಿವಿಧ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಅಗತ್ಯವಿರುವ ಮಹಿಳೆಯರಿಗೆ ನೆರವಾಗಿದ್ದೇವೆ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಆಸ್ಪತ್ರೆಯ ಪ್ರಧಾನ ವ್ಯವಸ್ಥಾಪಕ ಡಾ. ವಿಜು ರಾಜನ್ ತಿಳಿಸಿದರು.
ಮಹಿಳೆಯರಿಗೆ ವಿಶೇಷ ಆರೋಗ್ಯ ತಪಾಸಣೆ ಮಾ. 25 ರವರೆಗೆ ನಡೆಯಲಿದ್ದು, ಆಸಕ್ತರು ಹೆಚ್ಚಿನ ಮಾಹಿತಿ ಮತ್ತು ಹೆಸರು ನೋಂದಾಯಿಸಲು ದೂ. 3989896 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

