ಮೈಸೂರು

ಸೆಲ್ಲಾರ್‌ನಲ್ಲಿ ವ್ಯಾಪಾರ, ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಮೈಸೂರು: ನಿಯಮ ಮತ್ತು ನಕ್ಷೆ ಉಲ್ಲಂಘಿಸಿರುವ ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ರಕ್ಷಣಾ ವೇದಿಕೆ ಪದಾಧಿಕಾರಿಗಳು ಶುಕ್ರವಾರ ಪಾಲಿಕೆ ಕಚೇರಿ ಎದುರು ಪ್ರತಿಭಟಿಸಿದರು.
ಟೆಂಡರ್ ಅವಧಿ ಮುಗಿದಿದ್ದರೂ ಹಣ ಸುಲಿಗೆ ಮಾಡುತ್ತಿರುವ ಟೆಂಡರುದಾರರನ್ನು ಎತ್ತಂಗಡಿ ಮಾಡಿಸಿ, ಬಾಕಿ ವಸೂಲು ಮಾಡಬೇಕು. ಒಂದು ವೇಳೆ ನಿಗದಿತ ಸಮಯಕ್ಕೆ ಬಾಕಿ ಹಣ ನೀಡದಿದ್ದರೆ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅವರ ಚರ ಮತ್ತು ಸ್ಥಿರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಅಂತೆಯೆ ಈ ಸ್ಥಳಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಇ- ಪ್ರೊಕ್ಯೂರ್‌ಮೆಟ್ ಮೂಲಕ ಮರು ಗುತ್ತಿಗೆ ಕರೆಯಬೇಕು ಎಂದು ಆಗ್ರಹಿಸಿದರು.
ನಗರದ ಅನೇಕ ಕಟ್ಟಡಗಳು ನಿಯಮ ಮತ್ತು ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗಿವೆ. ಅಂತಹ ಕಟ್ಟಡಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸೆಲ್ಲಾರ್‌ಗಳಲ್ಲಿನ ವ್ಯಾಪಾರ ವಹಿವಾಟು ತೆರವುಗೊಳಿಸಿ ಮೂಲ ಉದ್ದೇಶಕ್ಕೆ ಬಳಕೆ ಆಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಅನೇಕ ಕಡೆಗಳಲ್ಲಿ ಪಾದಾಚಾರಿ ಮಾರ್ಗವನ್ನು ಅತಿಕ್ರಮಿಸಲಾಗಿದೆ. ಆದರೂ ಪಾಲಿಕೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತ್ತಿದ್ದಾರೆ. ಅಲ್ಲದೆ ಸ್ಥಾಯಿ ಸಮಿತಿ ಸದಸ್ಯರು ಸಹ ಈ ಬಗ್ಗೆ ಗಮನ ನೀಡುತ್ತಿಲ್ಲ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಅಲ್ಲದೆ ನಗರದಲ್ಲಿನ ಪಾರ್ಕಿಂಗ್ ಮಾಫಿಯಾಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೇದಿಕೆ ಕಾರ್ಯದರ್ಶಿ ರಾಕೇಶ್ ಭಟ್, ಯುವ ಘಟಕದ ಅಧ್ಯಕ್ಷ ಗುರುರಾಜ್ ಶೆಟ್ಟಿ, ಪ್ರಮೋದ್‌ಗೌಡ, ವಿಕ್ರಮ್, ಜಿ. ರಾಘವೇಂದ್ರ, ಎಸ್.ಎನ್. ರಾಜೇಶ್, ಗುರುಮೂರ್ತಿ, ತನು, ರವೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.