ಅಕ್ರಮ ಹಣ ಸಾಗಣೆ ಪ್ರಕರಣ: ರಾಜ್ಯ ಪೊಲೀಸರ ವಿರುದ್ಧ ತನಿಖೆಗೆ ಆದೇಶ
ಮೈಸೂರು: 2014ರ ಜನವರಿಯಲ್ಲಿ ಇಲವಾಲ ಪೊಲೀಸರು ಕೇರಳ ಮೂಲದ ಇಬ್ಬರನ್ನು ಬಂಧಿಸಿ, ಅವರಿಂದ ವಶಪಡಿಸಿಕೊಂಡಿದ್ದ 20 ಲಕ್ಷ ರು. ಪ್ರಕರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ.
ಅಕ್ರಮವಾಗಿ ಹಣ ಸಾಗಿಸುತ್ತಿರುವ ಆರೋಪ ಎದುರಿಸುತ್ತಿರುವ ಕೇರಳ ಮೂಲದ ಅಕ್ತರ್ ಹುಸೇನ್ ಹಾಗೂ ಮುನೀರ್ ಅವರು ಕೇರಳ ರಾಜ್ಯದ ಗೃಹ ಸಚಿವರಿಗೆ ಮೈಸೂರು ತಾಲೂಕಿನ ಇಲವಾಲ ಪೊಲೀಸರ ವಿರುದ್ಧ ದೂರು ನೀಡಿದ್ದು, ನಮ್ಮಿಂದ ಅವರು ಎರಡೂವರೇ ಕೋಟಿ ರು.ಗಳನ್ನು ವಶಪಡಿಸಿಕೊಂಡು, ಪ್ರಕರಣದಲ್ಲಿ ಕೇವಲ 20 ಲಕ್ಷ ರು. ಎಂದು ದಾಖಲಿಸಿಕೊಂಡಿದ್ದಾರೆ. ಈ ಹಿನ್ನಲೆ ತಮಗೆ ನ್ಯಾಯ ದೊರಕಿಸಿಕೊಡುವಂತೆ ಅವರು ಮನವಿ ಮಾಡಿದ್ದಾರೆ.
ಆದ್ದರಿಂದ ಕೇರಳ ಗೃಹ ಸಚಿವರು, ಕರ್ನಾಟಕ ರಾಜ್ಯ ಗೃಹ ಸಚಿವ ಜಾರ್ಜ್ ಅವರಿಗೆ ಈ ಬಗ್ಗೆ ತನಿಖೆ ಆದೇಶಿಸುವಂತೆ ಮನವಿ ಮಾಡಿದ್ದಾರೆ. ಹಾಗಾಗಿ ಗೃಹ ಸಚಿವರು, ರಾಜ್ಯ ಪೊಲೀಸ್ ಮಹಾನಿದೇರ್ಶಕರ ಹಾಗೂ ದಕ್ಷಿಣ ವಲಯ ಐಜಿಪಿ ರಾಮಚಂದ್ರರಾವ್ ಅವರಿಗೆ ಪ್ರಕರಣದ ಕುರಿತು ಸತ್ಯಾಸತ್ಯತೆ ಪರಿಶೀಲಿಸುವಂತೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಎಸ್ಪಿಗೆ ಆದೇಶಿದ್ದಾರೆ.
ಈ ವಿಷಯ ಖಚಿತ ಪಡಿಸಿರುವ ಜಿಲ್ಲಾ ಎಸ್ಪಿ ಅಭಿನವ್ ಖರೆ, ತನಿಖೆ ಪ್ರಗತಿ ಹಂತದಲ್ಲಿದೆ. ಹೆಚ್ಚಿನ ಮಾಹಿತಿಯನ್ನು ಬಹಿರಂಗ ಪಡಿಸಲು ನಿರಾಕರಿಸಿದರು.
ಕಳೆದ ಜ. 4ರಂದು ಇಲವಾಲ ಪೊಲೀಸರು ಖಾಸಗಿ ಬಸ್ಸಿನ ಮೇಲೆ ಮಾಡಿದ ವೇಳೆ ಕೇರಳ ಮೂಲದ ಹುಸೇನ್ ಹಾಗೂ ಮುನೀರ್ ಅವರನ್ನು ಬಂಧಿಸಿ, ಅವರಿಂದ 20 ಲಕ್ಷ ರು. ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.ಆನಂತರ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಕೇರಳ ಗೃಹಸಚಿವರ ಬಳಿ ತೆರಳಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

