ಮೈಸೂರು

ಸುದ್ದಿ ಸಂಕ್ಷೇಪ

Published On :

ವಿದ್ಯಾರ್ಥಿಗಳಿಗೆ ಲೇಖನ ಸ್ಪರ್ಧೆ
ಮೈಸೂರು: ಡಾ.ಶ್ರೀ ಶಿವರಾತ್ತಿ ರಾಜೇಂದ್ರ ಸ್ವಾಮೀಜಿ ಜಯಂತಿ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಸಾದ ದ್ವೈಮಾಸಿಕ ಲೇಖನ ಸ್ಪರ್ಧೆ ಏರ್ಪಡಿಸಿದೆ. 2013-14ನೇ ಸಾಲಿನಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ವಚನಗಳಲ್ಲಿ ಪರಿಸರ ಎಂಬ ವಿಷಯ ಕುರಿತು ಲೇಖನ ಸ್ಪರ್ಧೆ ಏರ್ಪಡಿಸಿದೆ. ಲೇಖನ ಸ್ವಂತದಾಗಿದ್ದು, 6 ರಿಂದ 8 ಪುಟ ಮೀರಬಾರದು. ಲೇಖನ ಕಳುಹಿಸುವ ವಿದ್ಯಾರ್ಥಿಗಳು ಆಯಾ ಕಾಲೇಜಿನ ಮುಖ್ಯಸ್ಥರಿಂದ ಫೋಟೋ ಸಮೇತ ದೃಢೀಕರಿಸಿ ಲೇಖನವನ್ನು 2014ರ ಫೆ.14 ರೊಳಗೆ ನಿರ್ದೇಶಕರು, ಪ್ರಸಾದ ಲೇಖನ ಸ್ಪರ್ಧೆ, ಪ್ರಕಟಣಾ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ, ಡಾ.ಶಿವರಾತ್ರಿ ರಾಜೇಂದ್ರ ವೃತ್ತ, ಮೈಸೂರು - 570004 ಇಲ್ಲಿಗೆ ಕಳುಹಿಸಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗಾಗಿ- ದೂ. 2548211 ಮತ್ತು 2548212 ಸಂಪರ್ಕಿಸಬಹುದು.
ಪಿಯು ಕಾಲೇಜು ಪ್ರಾಂಶುಪಾಲರ ಸಭೆ ನಾಳೆ
ಮೈಸೂರು: 2013- 14ನೇ ಸಾಲಿನ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆಯನ್ನು ಜ.4 ರಂದು ಮಹಾರಾಜ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಂ. ಪುಟ್ಟು ತಿಳಿಸಿದ್ದಾರೆ. ಅಂದು ಬೆಳಗ್ಗೆ 11ಕ್ಕೆ ನಡೆಯಲಿರುವ ಈ ಸಭೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ನಡೆಸುವ ಬಗ್ಗೆ ಚರ್ಚಿಸಲಾಗುವುದು. ಪ್ರಯೋಗಾಲಯ ಮತ್ತು ಪೀಠೋಪಕರಣಗಳ ಅನುದಾನ ಬಳಕೆ ಹಾಗೂ ಇನ್ನಿತರ ಶೈಕ್ಷಣಿಕ ಮತ್ತು ಆಡಳಿತ ವಿಷಯಗಳ ಸಮಾಲೋಚನೆ ನಡೆಸಲಾಗುವುದು ಎಂದಿದ್ದಾರೆ.
ಸ್ಪರ್ಧೆಗೆ ಆಹ್ವಾನ: ಕರ್ನಾಟಕ ಹ್ಯಾಂಡ್‌ಬಾಲ್ ಅಸೋಸಿಯೇಷನ್ ವತಿಯಿಂದ ನಗರ ಮತ್ತು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಒಲಿಂಪಿಕ್ಸ್ ಹಾಗೂ ಅಥ್ಲೆಟಿಕ್ಸ್ ಕುರಿತು ರಸಪ್ರಶ್ನೆ ಸ್ಪರ್ಧೆಯನ್ನು ಜ.4 ರಂದು ಏರ್ಪಡಿಸಿದೆ. ಜಯಲಕ್ಷ್ಮಿಪುರಂ ಮಹಾಜನ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಅಂದು ಮಧ್ಯಾಹ್ನ 1.30ಕ್ಕೆ ಈ ಸ್ಪರ್ಧೆ ನಡೆಯಲಿದ್ದು, ಪ್ರತಿ ಕಾಲೇಜಿನಿಂದ ಇಬ್ಬರು ಬಾಲಕರು ಹಾಗೂ ಬಾಲಕಿಯರು ಭಾಗವಹಿಸಬಹುದು. ಆಸಕ್ತ ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವಂತೆ ಪ್ರಾಂಶುಪಾಲರಿಗೆ ಡಿಡಿಪಿಯು ಸೂಚಿಸಿದ್ದಾರೆ.
ವೈದ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಭೇಟಿ
ಮೈಸೂರು: ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ವಿ.ರಶ್ಮಿ ಗುರುವಾರ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲಿಸಿದರು. ಕೆ.ಆರ್. ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಾರ್ಡ್‌ಗಳ ಅಭಿವೃದ್ಧಿ, ಒಳಚರಂಡಿ ಕಾಮಗಾರಿ, ಶಸ್ತ್ರಚಿಕಿತ್ಸಾ ಘಟಕಗಳ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತಾ, ಚಿಕಿತ್ಸಾ ವಿಧಾನ ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆ ಅಧೀಕ್ಷಕ ಡಾ.ಬಿ.ಜಿ. ಸಾಗರ್ ಮತ್ತು ಎಲ್ಲಾ ವಿಭಾಗದ ವೈದ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.