ಮೈಸೂರು

ಆಪ್ತ ಸಮಾಲೋಚಕರ ಪಾತ್ರ ಮಹತ್ವದ್ದು

Published On :

ಮೈಸೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸುವಲ್ಲಿ ಸಲಹಾ ಕೇಂದ್ರಗಳ ಆಪ್ತ ಸಮಾಲೋಚಕರ ಪಾತ್ರ ಮಹತ್ವದ್ದಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್.ರುದ್ರಮುನಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಕ್ಯಾಬ್ ವತಿಯಿಂದ ನಗರದ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಆಯೋಜಿಸಿರುವ ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ- 2005 ಕುರಿತ ಜಿಲ್ಲಾ ಮಟ್ಟದ ಎರಡು ದಿನಗಳ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ವೈವಾಹಿಕ ಸಂಬಂಧಿ ಅಪರಾಧ ಪ್ರಕರಣಗಳ ಸಂಖ್ಯೆ ನ್ಯಾಯಾಲಯದಲ್ಲಿ ಹೆಚ್ಚುತ್ತಿವೆ. ಮೈಸೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ 4500ಕ್ಕೂ ಹೆಚ್ಚು ಪ್ರಕರಣಗಳು ಇವೆ. ನ್ಯಾಯಾಲಯದ ಪ್ರಕರಣಗಳ ಪೈಕಿ ಶೇ.50 ರಷ್ಟು ಪ್ರಕರಣಗಳು ಕೌಟುಂಬಿಕ ದೌರ್ಜನ್ಯ ವಿವಾಹ ವಿಚ್ಛೇದನ ಪರಿಹಾರಕ್ಕೆ ಸಂಬಂಧಿಸಿವೆ. ಕೌಟುಂಬಿಕ ಸಲಹಾ ಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದಲ್ಲಿ ಇಂತಹ ಪ್ರಕರಣಗಳು ನ್ಯಾಯಾಲಯದ ಮೆಟ್ಟಲೇರದಂತೆ ನೋಡಿಕೊಳ್ಳಬಹುದು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ಎನ್.ಆರ್.ವಿಜಯ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾರ್ತಾ ಇಲಾಖೆಯ ಉಪನಿರ್ದೇಶಕ ಎ.ಆರ್. ಪ್ರಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎನ್. ಅರ್ಚನಾ, ಜೆಎಸ್‌ಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.