'ಆವಿಷ್ಕಾರಗಳು ಜನ ಸಾಮಾನ್ಯರಿಗೂ ತಿಳಿಯಲಿ'
ಮೈಸೂರು: ಪ್ರಸಕ್ತ ಸಾಲಿನ ದಶಕವನ್ನು ಆವಿಷ್ಕಾರದ ದಶಕ ಎಂದು ಗುರುತಿಸಲಾಗಿದೆ ಎಂದು ನ್ಯಾಕ್‌ನ ಮಾಜಿ ನಿರ್ದೇಶಕ ಪ್ರೊ.ಎಚ್.ಎ. ರಂಗನಾಥ್ ಹೇಳಿದರು.
ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಶುಕ್ರವಾರ ಭಾರತೀಯ ವಿಜ್ಞಾನ ಕಾಂಗ್ರೆಸ್ ಬೆಂಗಳೂರು ಘಟಕ ಮತ್ತು ಮೈಸೂರು ವಿವಿ ಭೂವಿಜ್ಞಾನ ಅಧ್ಯಯನ ವಿಭಾಗ ಆಯೋಜಿಸಿದ್ದ ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ಹೊಸ ಆವಿಷ್ಕಾರಗಳ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.
2010- 2020ನೇ ಈ ದಶಕವನ್ನು ಆವಿಷ್ಕಾರದ ದಶಕ ಎಂದು ಕರೆಯಲಾಗುತ್ತಿದೆ. ಕೇವಲ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾತ್ರವಲ್ಲದೆ ಅನೇಕ ವಿಷಯಗಳಲ್ಲಿ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಿದೆ.
ಆವಿಷ್ಕಾರ ಎಂಬುದು ಅಭಿವೃದ್ಧಿಗೆ ಪೂರಕವಾಗಿದೆ. ನಾವು ಕೇವಲ ಆವಿಷ್ಕಾರಗಳನ್ನು ಮಾಡಿದರೆ ಸಾಲದು. ಅದು ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂದರು.
ಜಿನೊಮ್ ಸೆಂಟರ್ ಜಾಲತಾಣ ಉದ್ಘಾಟಿಸಿದ ಕುಲಸಚಿವ ಪ್ರೊ.ಸಿ. ಬಸವರಾಜು ಮಾತನಾಡಿ, ಈ ಜಾಲ ತಾಣವು ವಿಶ್ವದ ನಾಲ್ಕನೆ ಮತ್ತು ಭಾರತದ ಮೊದಲ ಜಾಲ ತಾಣವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ವಿಜಯಲಕ್ಷ್ಮೀ ಸಕ್ಸೇನಾ, ಪ್ರೊ.ವಿ.ಎ. ವಿಜಯನ್, ಪ್ರೊ. ಶಿವಜ್ಞಾನಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

