ಮೈಸೂರು

ಇಬ್ಬರ ಶವ ಪತ್ತೆ

Published On :

ಮೈಸೂರು: ಪ್ರತ್ಯೇಕ ಪ್ರಕರಣಗಳಲ್ಲಿ ಮೈಸೂರು ಮತ್ತು ಚಾಮರಾಜನಗರ ರೈಲು ನಿಲ್ದಾಣಗಳಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಮೈಸೂರು ರೈಲು ನಿಲ್ದಾಣದ ಫ್ಲಾಟ್ ಫಾರಂ 2ರಲ್ಲಿ ರೈಲಿನ ಬೋಗಿ ಶೌಚಾಲಯದ ಬಳಿ ಶನಿವಾರ 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಚಹರೆ- 5.6 ಅಡಿ ಎತ್ತರ, ದೃಢಕಾಯ ಮೈಕಟ್ಟು, ಕಪ್ಪು ಮೈಬಣ್ಣ, ದುಂಡುಮುಖ, ತಲೆಯಲ್ಲಿ ಕಪ್ಪು- ಬಿಳಿ ಕೂದಲು, ಕುರುಚಲು ಗಡ್ಡ-ಮೀಸೆ ಬಿಟ್ಟಿರುತ್ತಾರೆ. ಸಿಮೆಂಟ್ ಬಣ್ಣದ ಜರ್ಕಿನ್, ಹಸಿರು ಬಣ್ಣದ ಸ್ವೆಟರ್, ಕಪ್ಪು ಬಣ್ಣದ ಪ್ಯಾಂಟ್, ಬಲಗೈಯಲ್ಲಿ ಕೆಂಪು ಬಣ್ಣದ ದಾರ, ಕಪ್ಪು- ಕಂದು ಬಣ್ಣದ ಪ್ಯಾರಾಗನ್ ಚಪ್ಪಲಿ ಧರಿಸಿದ್ದಾರೆ. ಮೃತರ ದೇಹವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದೆ.  ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ರೈಲು ನಿಲ್ದಾಣದ ವಾಟರ್ ಟ್ಯಾಂಕ್ ಹತ್ತಿರ 55 ವರ್ಷದ ಅಪರಿಚಿತ ವ್ಯಕ್ತಿ ಗುರುವಾರ ಮೃತಪಟ್ಟಿದ್ದಾರೆ. ಚಹರೆ- 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡು ಮುಖ, ಬೊಕ್ಕ ತಲೆಯಲ್ಲಿ ಒಂದೂವರೆ ಇಂಚು ಉದ್ದದ ಕಪ್ಪು-ಬಿಳಿ ಕೂದಲು, ಕುರುಚಲು ಗಡ್ಡ- ಮೀಸೆ ಬಿಟ್ಟಿರುತ್ತಾರೆ. ಮೃತರ ದೇಹವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ವಾರಸುದಾರರ ಬಗ್ಗೆ ಮಾಹಿತಿ ದೊರೆತಲ್ಲಿ ದೂ. 0821- 2516579 ಸಂಪರ್ಕಿಸಲು ರೈಲ್ವೆ ಠಾಣೆ ಪೊಲೀಸರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.