ಗ್ರಾಮೀಣ ಮೂಲ ಸವಲತ್ತಿಗೆ ಆದ್ಯತೆ
ಪಿರಿಯಾಪಟ್ಟಣ: ಗ್ರಾಮಗಳ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ. ವೆಂಕಟೇಶ್ ಹೇಳಿದರು.
ತಾಲೂಕಿನ ಬಸಲಾಪುರ ಗ್ರಾಮದಲ್ಲಿ ಎಂ.ಬಿ. ರಸ್ತೆಯಿಂದ ಬಸಲಾಪುರ- ವಿ.ಜಿ. ಕೊಪ್ಪಲು- ಎನ್. ಶೆಟ್ಟಹಳ್ಳಿ ವರೆಗೆ ರು. 47.47 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆ ಬದಿಯಲ್ಲಿ ಸೌದೆಗಳನ್ನು ಹಾಕುವುದನ್ನು ಗ್ರಾಮಸ್ಥರು ನಿಲ್ಲಿಸಬೇಕು. ಇಲ್ಲವಾದಲ್ಲಿ ರಸ್ತೆಗಳು ಹಾಳಾಗುವುದರೊಂದಿಗೆ ಚರಂಡಿಯೂ ಮುಚ್ಚಿಹೋಗುತ್ತದೆ. ಇದರಿಂದ ಗ್ರಾಮಸ್ಥರಿಗೆ ತೊಂದರೆ ಹೆಚ್ಚು. ಗ್ರಾಮದಲ್ಲಿ ಸುವರ್ಣ ಗ್ರಾಮ ಯೋಜನೆ ಕಾಮಗಾರಿಗಳು ನಡೆಯುತ್ತಿದ್ದು ಯೋಜನೆ ಮುಗಿದ ನಂತರವೂ ಕಾಮಗಾರಿಗಳು ಉಳಿದಲ್ಲಿ ಮುಂದಿನ ದಿನಗಳಲ್ಲಿ ಕಾಮಗಾರಿ ಮಾಡಿಸಿಕೊಡಲಾಗುವುದು ಎಂದರು.
ಗ್ರಾಮದಲ್ಲಿ ಚರಂಡಿ ನಿರ್ಮಿಸುವಾಗ ಚರಂಡಿಯಲ್ಲಿ ನೀರು ನಿಲ್ಲದಂತೆ ಸಮರ್ಪಕವಾಗಿ ಕಾಮಗಾರಿ ನಡೆಸುವಂತೆ ಇಂಜಿನಿಯರ್ಗೆ ಸೂಚಿಸಿದರು. ನಂತರ ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಹರಿಜನ ಕಾಲೋನಿಯಲ್ಲಿ 19.7 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ, ಪೂನಾಡಹಳ್ಳಿ ಗ್ರಾಮದಲ್ಲಿ ಸುವರ್ಣಗ್ರಾಮ ಯೋಜನೆಯಡಿ 18 ಲಕ್ಷ ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಹಾಗೂ ಕೊಣಸೂರು ಬಸವನಗರದಲ್ಲಿ ಜೋಗನಹಳ್ಳಿ- ಕೋಣಸೂರು ಮಾರ್ಗಕ್ಕೆ ರು. 30 ಲಕ್ಷ ವೆಚ್ಚದ 0.9 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ತಾಪಂ ಅಧ್ಯಕ್ಷೆ ಪವಿತ್ರಾ, ಸದಸ್ಯ ಎಚ್.ಎಸ್. ಪ್ರಕಾಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೇಗೌಡ, ಎಪಿಎಂಸಿ ಸದಸ್ಯ ರಾಜಶೇಖರ್, ಗ್ರಾಪಂ ಅಧ್ಯಕ್ಷ ಪ್ರದೀಪ್, ಪಿಡಿಒ ಶೋಭಾರಾಣಿ, ಎಂಜಿನಿಯರುಗಳಾದ ಚನ್ನಬಸಪ್ಪ, ಯೋಗಾನಂದ್, ಸೌಮ್ಯ, ಪಾಷಾ, ಮುಖಂಡರಾದ ಮಾನ್ಸೂನ್ಚಂದ್ರು, ನೀಲಂಗಾಲ ಜಯಣ್ಣ, ರಾಮು, ಪಿ. ಮಹದೇವ್, ಜಮೀರ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

