ಮೈಸೂರು

ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಗದ್ದುಗೆ

Published On :

ಟಿ. ನರಸೀಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತೃ ಪಕ್ಷಕ್ಕೆ ಮರಳಿ ಬಂದಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಅವಕಾಶವಿದೆ ಎಂದು ಮಾಜಿ ಶಾಸಕ ಸಿ. ರಮೇಶ್ ಹೇಳಿದರು.
ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಯಡಿಯೂರಪ್ಪ ಪುನರ್ ಆಗಮನ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಗದ್ದುಗೆ ಹಿಡಿಯಲಿದೆ. ಅವರು ಬಿಜೆಪಿ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು. ಆರೇಳು ತಿಂಗಳುಗಳ ಕಾಲ ಪಕ್ಷದಿಂದ ದೂರವಿದ್ದು, ಈಗ ಮರಳಿ ಪಕ್ಷಕ್ಕೆ ಬಂದಿದಿದ್ದಾರೆ ಎಂದರು.
ಲೋಕಸಭಾ ಚುನಾವಣೆಯ ನಂತರ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಹತ್ತಾರು ಭಾರಿ ವಿಧಾನಸಭೆ ಪ್ರತಿನಿಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಜಿ. ಪರಮೇಶ್ವರ್ ಅವರಂತಹ ದಲಿತ ನಾಯಕರು ಸಿಎಂ ಆಗುವುದನ್ನು ತಪ್ಪಿಸಿ, ಆಡಳಿತದಲ್ಲಿ ಮೇಲ್ವರ್ಗಗಳ ವಿರೋಧಿ ಧೋರಣೆ ತಾಳಿದ್ದಾರೆ. ಮಹಿಳೆಯರು ಮನೆಗಷ್ಟೇ ಸೀಮಿತವಾಗದೇ ರಾಜಕೀಯ ಕ್ಷೇತ್ರದಲ್ಲೂ ದುಡಿದು ಸಾಮಾಜಿಕವಾಗಿ ಗುರುತಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಗುರುಮಲ್ಲಮ್ಮ ಮಾತನಾಡಿ, ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ನಡೆಯುತ್ತಿದ್ದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಮಿತಿ ಸಭೆಯನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸುವ ಮೂಲಕ ಹಳ್ಳಿಗಳಲ್ಲಿ ಸಂಘಟನೆಯನ್ನು ಆರಂಭಿಸಲಾಗುತ್ತಿದೆ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಮೂರ್ನಾಲ್ಕು ದಿನ ಪ್ರವಾಸ ಕೈಗೊಂಡು ಬೂತ್ ಮಟ್ಟದಲ್ಲಿ ಬಿಜೆಪಿಗೆ ಮಹಿಳೆಯರನ್ನು ಒಗ್ಗೂಡಿಸಲಾಗುವುದು ಎಂದರು.
ಹಿರಿಯ ಮುಖಂಡ ಬಿ.ಪಿ. ಪರಶಿವಮೂರ್ತಿ, ತಾಪಂ ಸದಸ್ಯರಾದ ಶಿವಮ್ಮ ಮಹದೇವ, ರೂಪಶ್ರೀ ಪರಮೇಶ್, ಪಪಂ ಸದಸ್ಯೆ ರತ್ನಮ್ಮ ನಿಂಗಣ್ಣ, ವೀಕ್ಷಕ ಆನಂದ ದೀಕ್ಷೀತ್, ಮುಖಂಡರಾದ ಸೋಸಲೆ ಪಾರ್ವತಿ, ಮೀನಾ, ಮಂಗಳ, ಮಹೇಶ್ವರಿ, ನಿಂಗಮ್ಮಣ್ಣಿ, ಮೀನಾಕ್ಷಿ, ಕಮಲಾಕ್ಷಿ, ಪ್ರೇಮಾ, ರತ್ನಮ್ಮ, ಸುಶೀಲಾ, ಸಾವಿತ್ರಮ್ಮ, ಗಿರಿಜಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.