ಸರ್ಕಾರಿ ಸವಲತ್ತು ಮನೆ ಬಾಗಿಲಿಗೆ ತಲುಪಿಸಿ
ಕೆ.ಆರ್. ನಗರ: ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಸಾರ್ವಜನಿಕರ ಸಮಸ್ಯೆ ಅರಿತು ಸಕಾಲದಲ್ಲಿ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸಿದಾಗ ಅವರ ಸೇವೆ ಸಾರ್ಥಕವಾಗುತ್ತದೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ವರ್ಗಾವಣೆಗೊಂಡ ಇಒ ಕೆ.ಬಸವರಾಜು ಅವರಿಗೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಲಹೆ ಸೂಚನೆಗಳನ್ನು ಪಡೆದಾಗ ಮಾತ್ರ ಅಧಿಕಾರಿಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದರು.
ಸರ್ಕಾರಿ ಸೇವೆ ಮಾಡುವ ಅಧಿಕಾರಿಗಳು ಮತ್ತು ನೌಕರರು ಎಷ್ಟು ವರ್ಷ ಸೇವೆ ಮಾಡುತ್ತಾರೆ ಎಂಬುದು ಮುಖ್ಯವಲ್ಲ ಅವರ ಅವಧಿಯಲ್ಲಿ ಎಷ್ಟು ಜನರ ಸಮಸ್ಯೆ ಮತ್ತು ಸಂಕಷ್ಟಗಳಿಗೆ ಸ್ಪಂದಿಸುತ್ತಾರೆ ಎಂಬುದು ಮುಖ್ಯ. ಅಂತಹ ಕೆಲಸವನ್ನು ವರ್ಗಾವಣೆಗೊಂಡಿರುವ ಕಾರ್ಯನಿರ್ವಹಣಾಧಿಕಾರಿ ಕೆ. ಬಸವರಾಜು ನಿರ್ವಹಿಸುತ್ತಾರೆ ಎಂದು ಪ್ರಶಂಸಿಸಿದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ತಾಪಂ ಸದಸ್ಯ ದೊಡ್ಡಕೊಪ್ಪಲು ನಾಗಣ್ಣ, ದಲಿತ ಮುಖಂಡ ಹನಸೋಗೆ ನಾಗರಾಜ್, ತಾಪಂ ಅಧ್ಯಕ್ಷೆ ಶಶಿಕಲಾ ರಮೇಶ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾಧಿಕ್ ಖಾನ್, ಸದಸ್ಯರಾದ ಹೇಮಾವತಿ ಅಶೋಕ್, ಕವಿತಾರವಿ, ಶಕುಂತಲಾ ರಮೇಶ್, ಕಮಲಮ್ಮ, ವಿಜಯಲಕ್ಷ್ಮಿ, ಎಂಜಿನಿಯರುಗಳಾದ ಸತೀಶ್, ರಂಗಸ್ವಾಮಿ, ಪಶು ಸಂಗೋಪನ ಸಹಾಯಕ ನಿರ್ದೇಶಕ ಡಾ.ರಮೇಶ್, ತಾಲೂಕು ವೈದ್ಯಾಧಿಕಾರಿ ಡಾ. ಶಿವಪ್ರಸಾದ್, ಗ್ರಾಪಂ ಸದಸ್ಯ ಚೌಕಹಳ್ಳಿ ರಾಜಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

