ಮೈಸೂರು

'ವ್ಯಸನದಿಂದ ದೂರ ಇದ್ದವನ ಬದುಕು ಹಸನು'

Published On :

ಪಿರಿಯಾಪಟ್ಟಣ: ಪ್ರತಿಯೊಬ್ಬರು ದುಶ್ಚಟಗಳಿಂದ ದೂರವಿರಬೇಕು ಆಗ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಕೆ. ಮಹದೇವ್ ಕಿವಿಮಾತು ಹೇಳಿದರು.
ತಾಲೂಕಿನ ಹರೀನಹಳ್ಳಿ ಗ್ರಾಮದ ಬಸವೇಶ್ವರ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇರಿದಂತೆ ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 10 ದಿನಗಳ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಸಂಸ್ಥೆಯ ಅನೇಕ ಜನಪರ ಯೋಜನೆಗಳನ್ನು ಹಮ್ಮಿಕೊಂಡು ಜನಸಾಮಾನ್ಯರ ನೆರವಿಗೆ ಬರುತ್ತಿದ್ದು ಇದರೊಂದಿಗೆ ಮದ್ಯವರ್ಜನ ಶಿಬಿರವನ್ನು ಆಯೋಜಿಸುವ ಮೂಲಕ ಮದ್ಯವ್ಯಸನಿಗಳಿಗೆ ಅರಿವು ಮೂಡಿಸುವ ಹಾಗೂ ಮದ್ಯಪಾನ ಮಾಡದಂತೆ ತಿಳುವಳಿಕೆ ಹೇಳುವ ಕೆಲಸ ನಡೆಯುತ್ತಿದೆ. ಇದು ಸಮಾಜ ಸುಧಾರಣೆಗೆ ಸಹಕಾರಿಯಾಗಿದೆ ಮದ್ಯವ್ಯಸನಿಗಳು ಶಿಬಿರವನ್ನು ಸಮರ್ಪಕವಾಗಿ ಬಳಸಿಕೊಂಡು ಮದ್ಯ ಸೇವನೆಯಿಂದ ಮುಕ್ತರಾಗಿ ಉತ್ತಮ ಜೀವನ ನಡೆಸುವಂತೆ ತಿಳಿಸಿದರು.
ಜನ ಜಾಗೃತಿ ವೇದಿಕೆಯ ಗಣೇಶ್‌ಆಚಾರ್ಯ ಮಾತನಾಡಿ, ಇದುವರೆಗೆ ರಾಜ್ಯದ 23 ಜಿಲ್ಲೆಗಳಲ್ಲಿ ಶಿಬಿರಗಳನ್ನು ನಡೆಸಲಾಗಿದ್ದು ಒಟ್ಟು 41 ಸಾವಿರ ಮಂದಿ ಮದ್ಯಪಾನದಿಂದ ಮುಕ್ತರಾಗಿದ್ದಾರೆ. ಅವರನ್ನು ನೋಡಿ 50 ಸಾವಿರಕ್ಕೂ ಹೆಚ್ಚು ಜನರು ಮದ್ಯ ವ್ಯಸನ ಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಯೋಜನಾಧಿಕಾರಿ ಶಿವಪ್ರಸಾದ್, ಅತ್ತಿಗೋಡು ಗ್ರಾಪಂ ಅಧ್ಯಕ್ಷೆ ಮಣಿಯಮ್ಮ, ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್.ಎಸ್. ಬಸವರಾಜು, ಬೆಟ್ಟದಪುರದ ಜನ ಜಾಗೃತಿ ವೇದಿಕೆ ಅಧ್ಯಕ್ಷ ಮುನಾವರ್‌ಪಾಷ, ಆರೋಗ್ಯ ಸಹಾಯಕಿ ಫಿಲೋಮಿನಾ, ಮೇಲ್ವಿಚಾರಕ ಸುಧೀರ್, ಹೈನುಗಾರಿಕೆ ಅಧಿಕಾರಿ ವಿನೋದ್ ಕುಮಾರ್   ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.