'ಅಂಕ ಗಳಿಕೆಗಿಂತ ವಿಷಯ ಜ್ಞಾನ ಮುಖ್ಯ'
ಮೈಸೂರು: ಪರೀಕ್ಷೆಗಳಲ್ಲಿ ಅಂಕ ಗಳಿಸುವುದನ್ನು ಮಾನದಂಡವಾಗಿಟ್ಟುಕೊಳ್ಳದೆ ಚೆನ್ನಾಗಿ ಅಧ್ಯಯನ ಮಾಡಿ ವಿಷಯವನ್ನು ಕಲಿತು ಜ್ಞಾನಾರ್ಜನೆ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸಂಚಾಲಕ ಅನಂತರಾಮು ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ನಗರ ಘಟಕ ಹಾಗೂ ಮೈಸೂರು ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಜ್ಞಾನೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿ ವಹಿಸಲು ಹಾಗೂ ಸ್ಪರ್ಧಾತ್ಮಕ ಸ್ಪರ್ಧೆಗಳಲ್ಲಿ ಭಾಗವಹಿಸಲು ವಿಜ್ಞಾನೋತ್ಸವ ನಡೆಸಲಾಗುತ್ತಿದೆ. ಇಂತಹ ಉತ್ಸವಗಳಲ್ಲಿ ಭಾಗವಹಿಸುವುದರಿಂದ ಕ್ರಿಯಾಶೀಲ ಶಕ್ತಿ ಹೆಚ್ಚುತ್ತದೆ ಎಂದರು.
ಭಾರತೀಯ ವಿದ್ಯಾಭವನ ಗೌರವ ಖಜಾಂಚಿ ಎ.ಟಿ. ಭಾಷ್ಯಂ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಅವಶ್ಯಕ. ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡಿಕೊಂಡು ಉತ್ತಮ ಜೀವನವನ್ನು ನಡೆಸುವಂತೆ ತಿಳಿಸಿದರು.
ಸಿಎಫ್ಟಿಆರ್ಐ ನಿವೃತ್ತ ಹಿರಿಯ ವಿಜ್ಞಾನಿ ಡಾ.ಎಂ. ಮಹದೇವಯ್ಯ ಮಾತನಾಡಿ, ವಿಜ್ಞಾನವು ನಿಂತ ನೀರಾಗಬಾರದು. ಅದು ಹರಿಯುವ ನೀರಾಗಿ ಹೊಸ ಹೊಸ ಆವಿಷ್ಕಾರ ನಡೆಯಲು ಕಾರಣವಾಗಬೇಕು. ದೇಶದ ಅಭಿವೃದ್ಧಿಗೆ ವಿಜ್ಞಾನದ ಬೆಳವಣಿಗೆ ಬಹುಮುಖ್ಯ. ದೇಶದ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು.
ಇದೇ ವೇಳೆ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿದ ತರಳಬಾಳು ವಿದ್ಯಾಸಂಸ್ಥೆ ಪರ್ಯಾಯ ಪಾರಿತೋಷಕ ಹಾಗೂ ಜ್ಞಾನಗಂಗಾ ಶಾಲೆ ದ್ವಿತೀಯ ಬಹುಮಾನ ಪಡೆದುಕೊಂಡಿತು. ಪ್ರಾಂಶುಪಾಲ ಶೇಷಾದ್ರಿ ಅಧ್ಯಕ್ಷತೆ ವಹಿಸಿದ್ದರು. ಚಂಪಾವತಿ, ಶ್ರೀನಿವಾಸನ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

