ನಿರ್ವಾಹಕ ಆತ್ಮಹತ್ಯೆ ಪ್ರಕರಣ: ನೌಕರರ ಅಹೋರಾತ್ರಿ ಧರಣಿ
ಎಚ್.ಡಿ. ಕೋಟೆ: ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ನಿರ್ವಾಹಕ ಜಿ.ಎಂ. ಮಂಜಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಚ್.ಡಿ. ಕೋಟೆ ಘಟಕದ ನಿರ್ವಾಹಕರು- ಚಾಲಕರು ಅಹೋರಾತ್ರಿ ಧರಣಿ ನಡೆಸಿದರು.ಮಂಜಪ್ಪ ಶವವನ್ನು ಪಟ್ಟಣಕ್ಕೆ ತರಬೇಕು. ಘಟನೆಗೆ ಕಾರಣವಾಗಿರುವ ತಪಾಸಣೆ ಅಧಿಕಾರಿ ಮಾಯೀಗೌಡ ಹಾಗು ಇತರ ಇಬ್ಬರನ್ನು ಅಮಾನತುಗೊಳಿಸಬೇಕು ಹಾಗೂ ಕಳೆದ 24 ಗಂಟೆಯಿಂದ ಬಸ್ಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗಳಿದಿರುವ ತಮ್ಮ ಮೇಲೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಗ್ರಾಮೀಣ ಡಿಸಿ ಬಿ.ವಿ. ಶ್ರೀನಿವಾಸ್ ಕಾರ್ಮಿಕ ಮುಖಂಡರ ಜತೆಯಲ್ಲಿ ಮಾತುಕತೆ ನಡೆಸಿ, ನಿಮ್ಮ ಬೇಡಿಕೆಗಳನ್ನು ನಾವು ಈಡೇರಿಸುತ್ತೇವೆ. ಘಟನೆಗೆ ಕಾರಣವಾಗಿರುವ ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

