30, 31 ರಂದು ಲೋಕಾಯುಕ್ತ ವಿಚಾರಣೆ
ಮೈಸೂರು: ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳನ್ನು ಜ.30 ಮತ್ತು 31 ರಂದು ಹುಣಸೂರು ಹಾಗೂ ಮೈಸೂರು ಉಪ ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುವುದು ಎಂದು ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ವೀಕೃತವಾಗಿರುವ ದೂರುಗಳ ವಿಚಾರಣೆ ಜೊತೆಗೆ ಹೊಸ ದೂರುಗಳನ್ನು ಸಹ ಸ್ವೀಕರಿಸಲಾಗುವುದು. ವಿವಿಧ ಇಲಾಖೆಗಳಿಗೆ ಸಂಬಂಧಿಸಿ ಸ್ವೀಕೃತವಾಗಿರುವ ದೂರು ವಿಚಾರಣಾ ದಿನಾಂಕದೊಳಗೆ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಂತ್ರಿಕ ಅಥವಾ ಆಡಳಿತಾತ್ಮಕ ಕ್ರಮಗಳ ಹೆಸರಿನಲ್ಲಿ ದೂರುಗಳಿಗೆ ಸಂಬಂಧಿಸಿದ ವಿಷಯಗಳನ್ನು ಇತ್ಯರ್ಥಪಡಿಸಲು ವಿಳಂಬ ಮಾಡಬೇಡಿ. ಉತ್ತಮ ಆಡಳಿತ ನೀಡುವ ಸಲುವಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ. ಅಕ್ರಮಗಳಲ್ಲಿ ತೊಡಗಬೇಡಿ ಎಂದು ಅವರು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ಆಡಳಿತದಲ್ಲಿ ವಿಳಂಬವು ಅಕ್ರಗಳಿಗೆ ಎಡೆ ಮಾಡಿಕೊಡುತ್ತದೆ. ಹೀಗಾಗಿ ಆದಷ್ಟು ಎಚ್ಚೆತ್ತುಕೊಳ್ಳುವುದು ಒಳಿತು. ತಪ್ಪಿದಲ್ಲಿ ಪರಿಣಾಮ ಎದುರಿಸ ಬೇಕಾಗುತ್ತದೆ ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.
ಡಿಸಿ ಸಿ. ಶಿಖಾ, ಹೆಚ್ಚುವರಿ ಡಿಸಿ ಎಂ.ಎಸ್. ಅರ್ಚನಾ, ಜಿಪಂ ಸಿಇಒ ಪಿ.ಎ. ಗೋಪಾಲ್, ಪಾಲಿಕೆ ಆಯುಕ್ತ ಪಿ.ಜಿ. ರಮೇಶ್, ಎಂಡಿಎ ಆಯುಕ್ತ ಎಸ್. ಪಾಲಯ್ಯ, ಎಸ್ಪಿ ಅಭಿನವ್ ಖರೆ, ಡಿಸಿಪಿ ರಾಜಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

