ಸುದ್ದಿ ಸಂಕ್ಷೇಪ
ಶಾಂತಿಯುತ ಮತದಾನ
ಹುಣಸೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಮೈಸೂರು ಜಿಲ್ಲೆಯಿಂದ ನಡೆದ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು. ಪಟ್ಟಣದ ಕರೀಗೌಡರ ಸರ್ಕಾರಿ ಶಾಲೆಯಲ್ಲಿ ಚುನಾವಣೆ ನಡೆಸಲಾಯಿತು. ಶೇ. 92 ರಷ್ಟು ಸಂಘದ ಸದಸ್ಯರು ಮತ ಚಲಾಯಿಸಿದರು. ತಾಲೂಕಿನಲ್ಲಿ 1132 ಮತಗಳಿದ್ದು, 1038 ಮತದಾರರು ಮತ ಚಲಾಯಿಸಿದ್ದಾರೆ. ಎಲ್ಲವೂ ಶಾಂತಿಯುತವಾಗಿ ನಡೆದಿದೆ ಎಂದು ಚುನಾವಣಾಧಿಕಾರಿ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ಬಿ.ಎನ್. ಸುರೇಶ್ ತಿಳಿಸಿದರು.
ಜಿಲ್ಲಾ ಪ್ರತಿಭಾ ಕಾರಂಜಿಗೆ ಆಯ್ಕೆ
ಹುಣಸೂರು: ತಾಲೂಕಿನ ಗಾವಡಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಜಾನಪದ ನೃತ್ಯ (ಕೋಲಾಟ) ವಿಭಾಗದ ವಿದ್ಯಾರ್ಥಿಗಳು ಸತತ 8ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾನಪದ ಗೀತ ಗಾಯನ ಸ್ಪಧೆಯಲ್ಲಿ ಎಂ.ಕೆ. ಪ್ರಸನ್ನಕುಮಾರ್ (ಪ್ರಥಮ), ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಬಿ.ಎಸ್. ಅಶ್ವಿನಿ (ದ್ವಿತೀಯ) ಹಾಗೂ ಧಾರ್ಮಿಕ ಪಠಣದಲ್ಲಿ ಬಿ.ಆರ್. ಗಂಗೆ (ತೃತೀಯ) ಸ್ಥಾನ ಪಡೆದಿದ್ದಾರೆ.
ಬಿಜೆಪಿಗೆ ನೇಮಕ
ಸುತ್ತೂರು: ಬಿಜೆಪಿ ವರುಣ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ವಾಜಮಂಗದ ಜಿ. ಮಂಜುನಾಥ್ ನೇಮಕವಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

