ಮೈಸೂರು

ಉಸ್ತುವಾರಿ ಸಚಿವರ ಮನೆ ಮುಂದೆ ಧರಣಿ

Published On :

ಮೈಸೂರು: ಮೈಸೂರು- ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ಸಚಿವರ ಮನೆ ಮುಂದೆ ಜ.13 ರಿಂದ ನಿರಂತರ ಧರಣಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಸಿದ್ದಾರೆ.
ಸಂಘದ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಟನ್ ಕಬ್ಬಿಗೆ 2500 ನಿಗದಿ ಮಾಡಿದ್ದರೂ ಕಾರ್ಖಾನೆಯವರು 2400 ಮಾತ್ರ ಪಾವತಿಸಿ ಸರ್ಕಾರದ ಆದೇಶಕ್ಕೆ ಮನ್ನಣೆ ನೀಡದಂತಾಗಿದೆ. ಈ ಸಂಬಂಧ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಬೇಡಿಕೆಗೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ನಿರಂತರ ಧರಣಿ ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲೆಯ ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪಉತ್ಪನ್ನಗಳಿಂದ ವಿದ್ಯುತ್, ಮದ್ಯ, ಎಥೆನಾಲ್, ಗೊಬ್ಬರ ತಯಾರಿಸಿ ಹೆಚ್ಚಿನ ಲಾಭ ಗಳಿಸುತ್ತಿದೆ. ಆದರೆ ನಷ್ಟದಲ್ಲಿರುವ ಮಂಡ್ಯ ಮೈಷುಗರ್ ಕಾರ್ಖಾನೆ ಕಡಿಮೆ ಇಳುವರಿ ಪರಿಗಣಿಸಿ ಖಾಸಗಿ ಲಾಬಿಗೆ ಮಣಿದು ಈ ಬೆಲೆ ನಿಗದಿ ಮಾಡುವ ಮೂಲಕ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಕೂಡನಹಳ್ಳಿ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಸಂಚಾಲಕ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕಾರ್ಯಾಧ್ಯಕ್ಷ ಪಿ. ಸೋಮಶೇಖರ್, ಉಪಾಧ್ಯಕ್ಷ ಸೋಮಶೇಖರ್ ಮುಖಂಡರಾದ ಬಸವರಾಜಪ್ಪ, ಮಾದಪ್ಪ, ಶಿವರುದ್ರಪ್ಪ, ನಾಗಣ್ಣ, ಮಾಗೂಡ್ಲು ರವಿ, ಪುರುಷೋತ್ತಮ್, ನಾರಾಯಣ, ರವಿ. ಪ್ರಭುಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.