ಮೈಸೂರು

ಬೋನಿಗೆ ಬಿದ್ದ ಮತ್ತೊಂದು ಚಿರತೆ

Published On :

ಎಚ್.ಡಿ. ಕೋಟೆ: ಸುಮಾರು 6 ವರ್ಷದ ಹೆಣ್ಣು ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ತಾಲೂಕಿನ ಹಂಪಾಪುರ ಹೋಬಳಿ ಹಿರೇನಂದಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಶಿವರಾಜಪ್ಪ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಕೆಲ ದಿನಗಳ ಹಿಂದೆ ಇಟ್ಟಿದ್ದ ಬೋನಿಗೆ ಈ ಚಿರತೆ ಸೋಮವಾರ ಬೆಳಗ್ಗೆ ಬಿದ್ದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಪಿರಿಯಾಪಟ್ಟಣ ತಾಲೂಕು ದೊಡ್ಡ ಹರವೆ ಅರಣ್ಯ ಪ್ರದೇಶಕ್ಕೆ ಈ ಚಿರತೆ ಬಿಡಲಾಗಿದೆ. ಇದರೊಂದಿಗೆ ಕಳೆದ 40 ದಿನಗಳ ಅವಧಿಯಲ್ಲಿ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ 5 ಹಾಗೂ ಜಕ್ಕಹಳ್ಳಿ ಗ್ರಾಮದಲ್ಲಿ ಒಂದು ಚಿರತೆಯನ್ನು ಅರಣ್ಯ ಇಲಾಖೆಯವರು ಗ್ರಾಮದವರ ಸಹಕಾರದೊಂದಿಗೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಸ್ಥಳದಲ್ಲಿ ಎಸಿಎಫ್ ಮಂಜುನಾಥ್, ಆರ್  ಎಫ್  ಒ ಮೋಹನ್ ಕುಮಾರ್, ಸಿಬ್ಬಂದಿ ಬಸವನಾಯಕ, ಶಿವಕುಮಾರ್, ಬಸವನಾಯಕ, ರಂಗಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.