ಸತತ ಪರಿಶ್ರಮದಿಂದ ಯಶಸ್ಸು: ಪೂರ್ಣಿಮಾ
ಕೆ.ಆರ್. ನಗರ: ಸಾಧನೆಯ ಹಾದಿ ಕಠಿಣವಾಗಿದ್ದು, ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಯಶಸ್ಸಿನ ಗುರಿ ತಲುಪಬಹುದು. ಈ ದಿಶೆಯಲ್ಲಿ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು ಎಂದು ಮಂಡ್ಯ ಜಿಪಂ ಉಪಕಾರ್ಯದರ್ಶಿ ಬಿ.ಆರ್. ಪೂರ್ಣಿಮಾ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಮುಕ್ತ ವಿವಿ ಅಧ್ಯಯನ ಕೇಂದ್ರದ ಸಂಪರ್ಕ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾನ್ಯ ತರಗತಿಗಳಲ್ಲಿ ವ್ಯಾಸಂಗ ಮಾಡಿ ಪಡೆದ ಪದವಿಗೆ ಇರುವಷ್ಟೆ ಮೌಲ್ಯ ಮುಕ್ತ ವಿವಿಯಲ್ಲಿ ಪಡೆದ ಪದವಿಗೂ ಇದ್ದು ಶ್ರಮವಹಿಸಿ ಕಲಿಕೆಯತ್ತ ಗಮನಹರಿಸಿ ಎಂದು ತಿಳಿಸಿದರು.
ಪ್ರಾಂಶುಪಾಲ ಪ್ರೊ.ಎಚ್. ಕೊಂಡರಸಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಕ್ತ ವಿವಿ ಅಧ್ಯಯನ ಕೇಂದ್ರದ ಸಂಯೋಜಕ ಕೆ.ಟಿ. ವೆಂಕಟೇಶ್, ಪ್ರೊ.ಸಿದ್ದಲಿಂಗಯ್ಯ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಶೇಖರ್, ಅತಿಥಿ ಉಪನ್ಯಾಸಕ ಕೆ.ಎಲ್. ರಮೇಶ್, ಮಂಜುನಾಥ್, ಭೇರ್ಯ ಪ್ರಸನ್ನ, ಬಸವರಾಜ್, ಬಿ.ಸಿ. ಕುಮಾರ್, ದಿವಾಕರ್, ಸಿ.ರವಿ, ಪ್ರಕಾಶ್, ಹರೀಶ್, ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

