ಮೈಸೂರು

ಸುದ್ದಿ ಸಂಕ್ಷೇಪ

Published On :

ಚುನಾವಣೆ ಸ್ಥಗಿತ: ಕೈ ಕಾರ್ಯಕರ್ತರ ಧರಣಿ
ಮೈಸೂರು: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು. ಮೈಸೂರಿನ ಲಕ್ಷ್ಮಿಪುರಂನಲ್ಲಿರುವ ಹಾರ್ಡ್ವಿಕ್ ಸಮುದಾಯ ಅಭಿವೃದ್ಧಿ ಕೇಂದ್ರದಲ್ಲಿ ಯುವ ಕಾಂಗ್ರೆಸ್ ಚುನಾವಣೆಯು ಸೋಮವಾರ ನಿಗದಿಯಾಗಿತ್ತು. ಆದರೆ, ಬ್ಯಾಲೆಟ್ ಪತ್ರದಲ್ಲಿ ಉಂಟಾದ ಗೊಂದಲದಿಂದಾಗಿ ಚುನಾವಣೆಯನ್ನು ಮುಂದೂಡಲಾಯಿತು. ಮತದಾನ ಮಾಡುವ ಸಲುವಾಗಿ ಮೈಸೂರು ಮತ್ತು ಕೊಡಗು ಜಿಲ್ಲೆಗಳಿಂದ ಆಗಮಿಸಿದ್ದ ಕಾರ್ಯಕರ್ತರು ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು. ಬೆಂಗಳೂರಿನಲ್ಲಿ ಬ್ಯಾಲೆಟ್ ಪತ್ರದಲ್ಲಿ ಉಂಟಾದ ಗೊಂದಲದಿಂದ ಚುನಾವಣೆ ಸ್ಥಗಿತಗೊಳಿಸಿ ಮುಂದೂಡಲಾಗಿದೆ. ಮರು ಚುನಾವಣೆ ದಿನದಂದು ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನದ ಬೂತ್ ಸ್ಥಾಪಿಸುವುದಾಗಿ ಚುನಾವಣಾಧಿಕಾರಿ ಗೋಪಾಲ್ ಭರವಸೆ ನೀಡಿದ ಬಳಿಕ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.
ನಾಳೆ ಕಡಕೊಳದಲ್ಲಿ ತೆಂಗು ಬೆಳೆಗಾರರ ಸರ್ವಸದಸ್ಯರ ಸಭೆ
ಮೈಸೂರು: ಚಾಮುಂಡೇಶ್ವರಿ ತೆಂಗು ಉತ್ಪಾದಕರ ಒಕ್ಕೂಟ ವತಿಯಿಂದ ಜ.8ರ ಬೆಳಗ್ಗೆ 10ಕ್ಕೆ ಕಡಕೊಳ ಗ್ರಾಮದಲ್ಲಿ ಸರ್ವಸದಸ್ಯರ ಸಭೆ ನಡೆಯಲಿದೆ. ಒಕ್ಕೂಟದ ಅಧ್ಯಕ್ಷ ಆದಿರಾಜಯ್ಯ ಅಧ್ಯಕ್ಷತೆ ವಹಿಸುವರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಎಂ. ನಾಗರಾಜು ತೆಂಗು ಬೆಳೆ ಹಾಗೂ ತೋಟಗಾರಿಕೆ ಇಲಾಖೆಯ ಸವಲತ್ತುಗಳ ಸಮಗ್ರ ಮಾಹಿತಿ ಬಗ್ಗೆ ಮಾತನಾಡುವರು. ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ, ಸಿಪಿಎಸ್ ಮತ್ತು ಸಿಪಿಎಫ್ ಮಾರ್ಗದರ್ಶಕಿ ಲತಾರಾಣಿ, ಸುತ್ತೂರಿನ ಕೆವಿಕೆಯ ವಿಷಯ ತಜ್ಞರಾದ ಸತೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ತರಬೇತಿ
ಮೈಸೂರು: ಚಾಮರಾಜ ಮೊಹಲ್ಲಾದಲ್ಲಿರುವ ನವೋದಯ ಫೌಂಡೇಷನ್  ನಲ್ಲಿ ಐಎಎಸ್, ಕೆಎಎಸ್ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ತರಬೇತಿ ನೀಡಲಿದ್ದು, ಜ. 7 ರೊಳಗೆ ಹೆಸರು ನೋಂದಾಯಿಸಿ. ಮೊ. 97418 68722 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.