ಪಕ್ಷ ಸಂಘಟಿಸಲು ಶ್ರಮಿಸಿ: ಶಾಸಕ
ಮೈಸೂರು: ಪಕ್ಷವನ್ನು ಸಂಘಟಿಸಿ ಮುನ್ನಡೆಸಲು ಎಲ್ಲರೂ ಶ್ರಮಿಸಬೇಕು ಎಂದು ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್ ಕರೆ ನೀಡಿದರು.
ಮೈಸೂರು ನಗರ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಸಂಘಟನೆಗಾಗಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಬೇಕಾದಾರೆ ಈಗಿನಿಂದಲೆ ಪಕ್ಷದ ಸಂಘಟನೆಗಾಗಿ ಎಲ್ಲಾ ಕಾರ್ಯಕರ್ತರು ಶ್ರಮವಹಿಸುವ ಅಗತ್ಯವಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಇಂತಹ ಸಂದರ್ಭದಲ್ಲಿ ಮತ್ತಷ್ಟು ಶ್ರಮ ವಹಿಸಿವುದು ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ಮುಖಂಡರ ಜವಾಬ್ದಾರಿಯಾಗಿದೆ ಎಂದರು. ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ರಾಜಣ್ಣ ಅವರನ್ನು ನಗರ ಘಟಕದ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಗಿದ್ದು, ಅವರ ನೇತೃತ್ವವನ್ನು ಒಪ್ಪಿಕೊಳ್ಳಬೇಕು. ಉಳಿದಂತೆ ಸಮಿತಿಗೆ ಹೊಸದಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕಿದೆ ಎಂದು ಅವರು ತಿಳಿಸಿದರು.
ನಗರಾಧ್ಯಕ್ಷ ರಾಜಣ್ಣ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಜ.13 ರಂದು ಆಯ್ಕೆ ಮಾಡಲು ಹಾಗೂ ನಾಳೆ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಚರ್ಚಿಸಲಾಯಿತು.
ಮೇಯರ್ ಎನ್.ಎಂ. ರಾಜೇಶ್ವರಿ, ಉಪಮೇಯರ್ ವಿ. ಶೈಲೇಂದ್ರ, ಮಾಜಿ ಮೇಯರ್ ಸಂದೇಶ್ಸ್ವಾಮಿ, ನಗರ ಕಾರ್ಯಾಧ್ಯಕ್ಷ ಎಸ್.ಬಿ.ಎಂ. ಮಂಜು, ನಗರ ಪಾಲಿಕೆ ಸದಸ್ಯರಾದ ಆರ್.ಲಿಂಗಪ್ಪ, ಕೆ.ವಿ ಮಲ್ಲೇಶ್, ಎಂ.ಜೆ. ರವಿಕುಮಾರ್, ಕೆ.ಟಿ ಚೆಲುವೇಗೌಡ, ಮಹದೇವಪ್ಪ, ಶಿವಣ್ಣ, ಬಾಲು, ಕೆಂಪಣ್ಣ, ಫೈರೋಜ್ಖಾನ್, ನಗರ ಮಹಿಳಾಧ್ಯಕ್ಷೆ ಪ್ರೇಮಾ ಶಂಕರೇಗೌಡ, ಮುಖಂಡರಾದ ಆರ್. ಮುದ್ದುರಾಜು, ಟಿ. ಪರಮೇಶ್, ಅನಂತನಾರಾಯಣ, ಎಂ.ಬಸವರಾಜು, ಸಂತೋಷ್, ಶಾಂತಮ್ಮ, ತೇಜಮಣಿ, ಕೌಶಲ್ಯ ಪ್ರಸಾದ್, ಚಿಕ್ಕತಾಯಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

