ಪಿಯುಸಿ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಜ. 6
ಪಿಯುಸಿ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ ವಿರೋಧಿಸಿ ಭಾರತ ವಿದ್ಯಾರ್ಥಿ ಪೆಡರೇಷನ್ (ಎಸ್ಎಫ್ಐ) ಮತ್ತು ಎಬಿವಿಪಿ ಕಾರ್ಯಕರ್ತರು ಪ್ರತ್ಯೇಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ಖಾಸಗಿ, ಅನುದಾನಿತ ಪಿಯು ಕಾಲೇಜುಗಳ ಶೇ.20 ಶುಲ್ಕ ಹೆಚ್ಚಿಸಿ ಸರ್ಕಾರ ಆದೇಶಿಸಿರುವುದು ಖಂಡನಿಯ. ಈ ಶುಲ್ಕ ಏರಿಕೆಯಿಂದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುವ ಅಪಾಯವಿದೆ. ಈ ಶುಲ್ಕ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಎಸ್ಎಫ್ಐ ಕಾರ್ಯಕರ್ತರು ಆರೋಪಿಸಿದರು.
ವಿದ್ಯಾರ್ಥಿಗಳ ದಾಖಲಾತಿ, ನೋಂದಣಿ, ಬೋಧನೆ, ಪ್ರಯೋಗಶಾಲೆ, ವಿಳಂಬ ದಾಖಲಾತಿ ದಂಡ ಶುಲ್ಕ ಸೇರಿದಂತೆ ವಿವಿಧ ಶುಲ್ಕಗಳನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡಲಾಗುತ್ತಿದೆ. ಪ್ರಸ್ತುತ 3,732 ಇರುವ ಶುಲ್ಕವನ್ನು ಸರ್ಕಾರದ ಆದೇಶದಿಂದ 4,485ಗೆ ಹೆಚ್ಚಳವಾಗಿದೆ. ಈ ಶುಲ್ಕ ಹೆಚ್ಚಳ ಆದೇಶವನ್ನು ಸರ್ಕಾರ ತಕ್ಷಣ ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ಎಲ್. ಜಗದೀಶ್ ಸೂರ್ಯ, ನಗರಾಧ್ಯಕ್ಷ ಬೀರೇಶ್, ಮುಖಂಡರಾದ ಮಹೇಶ್ಕುಮಾರ್ ಗುರುನಿರಂಜನ್ ಇದ್ದರು.
ಎಬಿವಿಪಿ: ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಶುಲ್ಕ ಪರಿಷ್ಕರಣೆ ಮಾಡಿರುವುದು ಅವೈಜ್ಞಾನಿಕ. ಪ್ರಸ್ತುತ 3,732 ರಿಂದ 4,485ಗೆ ಶುಲ್ಕ ಹೆಚ್ಚಿಸಲಾಗಿದೆ. ವಿದ್ಯಾರ್ಥಿ ವಿರೋಧಿ ಶುಲ್ಕ ಹೆಚ್ಚಳ ಆದೇಶವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಎಬಿವಿಪಿ ಕಾರ್ಯಕರ್ತರು ಒತ್ತಾಯಿಸಿದರು.
ಎಬಿವಿಪಿ ಮುಖಂಡರಾದ ಸ್ವಾತಿ, ತೇಜಸ್ವಿನಿ, ನೀಲಕಂಠ, ಮಹದೇವ, ಕಾರ್ತಿಕ್, ಅಮೂಲ್ಯ, ಚನ್ನಬಸವ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

