ಮೈಸೂರು

ಬಿ.ಇಡಿ ಕೋರ್ಸಿಗೆ ಪ್ರವೇಶಾತಿ ಆರಂಭ

Published On :

ಮೈಸೂರು: 2013-14ನೇ ಸಾಲಿನ ಸರ್ಕಾರಿ ಕೋಟಾದಡಿ ಬಿ.ಇಡಿ ಕೋರ್ಸಿಗೆ ಜ.10 ರವರೆಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತರು ಎನ್-27 ನೋಡೆಲ್ ಕೇಂದ್ರವಾದ ನಜರ್‌ಬಾದ್ ವಸಂತಮಹಲ್‌ನಲ್ಲಿ ಎಲ್ಲಾ ದಾಖಲಾತಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.
ಸರ್ಕಾರದಿಂದ ಮಾನ್ಯತೆ ಪಡೆದಿರುವ ಅನುದಾನಿತ ಮತ್ತು ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿ ಸೀಟು ಬಯಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ತಮ್ಮ ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳುವಂತೆ ಪ್ರಾಂಶುಪಾಲೆ ಎಂ. ಜೊಹರಾ ಜಬೀನ್ ಕೋರಿದ್ದಾರೆ.
ಅಭ್ಯರ್ಥಿಗಳ ಆರೋಪ: ಬಿ.ಇಡಿ ಕೋರ್ಸ್‌ನ ಸೀಟು ಹಂಚಿಕೆಯಲ್ಲಿ ಹಲವಾರು ಲೋಪ ಕಂಡುಬಂದಿವೆ ಎಂದು ಕೆಲವು ಅಭ್ಯರ್ಥಿಗಳು ಆರೋಪಿಸಿದ್ದಾರೆ. ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ ಸಂಸ್ಥೆಯನ್ನು ಬಿಟ್ಟು ಬೇರೆ ಸಂಸ್ಥೆಗಳಿಗೆ ವರ್ಗಾಯಸಲಾಗಿದೆ. ಶೇಕಡಾವಾರು ಕಡಿಮೆ ಅಂಕಗಳನ್ನು ಪಡೆದವರಿಗೆ ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆ, ಹೆಚ್ಚು ಅಂಕ ಪಡೆದವರನ್ನು ಅನುದಾನರಹಿತ ಸಂಸ್ಥೆಗಳಿಗೆ ನಿಯೋಜಿಸಲಾಗಿದೆ. ಸಂಬಂಧಪಟ್ಟವರು ಗಮನಹರಿಸಿ, ಗೊಂದಲ ನಿವಾರಿಸುವಂತೆ ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.