ತುಟ್ಟಿ ಬದುಕಿಗೆ ಪ್ರತಿಭಟನೆ ಕಾವು!
ಕೆ.ಆರ್. ನಗರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಶ್ರೀಮಂತರ ಪರವಾದ ಧೋರಣೆಗಳಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದ್ದು, ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸರ್ಕಾರವನ್ನು ವಜಾ ಮಾಡಬೇಕೆಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಶ್ರೀನಿವಾಸಗೌಡ ಆಗ್ರಹಿಸಿದರು.
ಗೃಹ ಬಳಕೆ ಮತ್ತು ಆಟೋ ಗ್ಯಾಸ್ ಬೆಲೆ ಏರಿಕೆಯ ವಿರುದ್ದ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶಕ್ಕೆ ಮಾರಕವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲಿ ಅತಿ ಅಗ್ಗದಲ್ಲಿ ದೊರಕುತ್ತಿದ್ದ ಅಡುಗೆ ಅನಿಲವನ್ನು ಈಗ ಕೊಂಡುಕೊಳ್ಳುವುದೆ ದುಸ್ತರವಾಗಿದ್ದು, ಕೇಂದ್ರ ಸರ್ಕಾರದವರಿಗೆ ಜನರ ಸಮಸ್ಯೆ ಸಂಕಷ್ಟ ಗೊತ್ತಿಲ್ಲ, ಅವರಿಗೆ ಬೇಕಿರುವುದು ಅಧಿಕಾರ ಅದಕ್ಕಾಗಿ ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಮಂಡ್ಯ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್.ವಿ. ಗಣೇಶ್ ಮಾತನಾಡಿದರು. ಇದಕ್ಕೂ ಮೊದಲು ನೂರಾರು ಬಿಜೆಪಿ ಕಾರ್ಯಕರ್ತರು ಪಟ್ಟಣದ ಅಂಬೇಡ್ಕರ್ ಪ್ರತಿಮೆಯಿಂದ ಹೊರಟು ಗರುಡಗಂಭದ ವೃತ್ತ, ಪುರಸಭಾ ವೃತ್ತದ ಮೂಲಕ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು.
ತಾ. ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷ ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಚಂದಗಾಲು ಪ್ರವೀಣ್, ಸಿ.ಕೆ. ಬಾಲಮನೋಹರ, ಲಾಳನಹಳ್ಳಿ ಮಹೇಶ್, ಜಿಲ್ಲಾ ಕಾರ್ಯದರ್ಶಿ ಪ್ರಭಾಕರ್ ಜೈನ್, ಯುವ ಮೋರ್ಚಾ ಅಧ್ಯಕ್ಷ ಹೊಸೂರು ಅನಿಲ್ಕುಮಾರ್, ರಾಜ್ಯ ಪರಿಷತ್ ಸದಸ್ಯ ಶಶಿಧರ ಮೂರ್ತಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಗುರುಮಲ್ಲಮ್ಮ, ಪ್ರಧಾನ ಕಾರ್ಯದರ್ಶಿ ಮಂಗಳಾ, ಕಾರ್ಯದರ್ಶಿ ರೂಪಶ್ರಿ, ನೀಲಮಣಿ, ತಾ. ಅಧ್ಯಕ್ಷೆ ಶೋಭಾ, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷೆ ನೀಲಾವತಿ, ವರುಣಾ ಕ್ಷೇತ್ರದ ಅಧ್ಯಕ್ಷೆ ರಾಜಲಕ್ಷೀ, ಹುಣಸೂರು ತಾ. ಅಧ್ಯಕ್ಷೆ ವಿಜಯಕುಮಾರಿ, ನಂಜನಗೂಡು ತಾಲೂಕು ಅಧ್ಯಕ್ಷೆ ನಾಗಮ್ಮ, ಮುಖಂಡರು, ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

